Tuesday, July 2, 2024

ಸತ್ಯ | ನ್ಯಾಯ |ಧರ್ಮ

ಡಿಕೆಶಿ ವಿರುದ್ಧ ಸಿಬಿಐ ಜಾರ್ಜ್‌ ಶೀಟ್‌ ಸಲ್ಲಿಸಲು ಕೋರ್ಟ್‌ ಅನುಮತಿ: ಸಿಬಿಐ ತನಿಖೆ ರದ್ದು ಕೋರಿ ಡಿಕೆಶಿ ಸಲ್ಲಿಸಿದ್ದ ಅರ್ಜಿ ವಜಾ!

ಬೆಂಗಳೂರು: ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ವಿರುದ್ಧದ ಅಕ್ರಮ ಆಸ್ತಿ ಸಂಪಾದನೆಗೆ ಸಂಬಂಧಿಸಿದಂತೆ ಕ್ರಿಮಿನಲ್‌ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಪ್ರಕರಣವನ್ನು ರದ್ದುಗೊಳಿಸುವಂತೆ ಡಿಕೆ ಶಿವಕುಮಾರ್‌ ಅವರು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ತಿರಸ್ಕರಿಸಿದೆ.

ಅಕ್ರಮ ಆದಾಯ ತೆರಿಗೆ ಪ್ರಕರಣದಲ್ಲಿ ಸಿಬಿಐ ಎಫ್‌ಐಆರ್‌ ಪ್ರಶ್ನಿಸಿದ್ದ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರಿಗೆ ಹೈಕೋರ್ಟ್‌ ಶಾಕ್‌ ನೀಡಿದೆ. ಸಿಬಿಐ ದಾಖಲಿಸಿರುವ ಎಫ್‌ಐಆರ್ ಅನ್ನು ಪ್ರಶ್ನಿಸಿ ಡಿಕೆ ಶಿವಕುಮಾರ್ ಕರ್ನಾಟಕ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದ ವಿಚಾರಣೆ ದೊಡ್ಡ ಮಟ್ಟದಲ್ಲಿ ಮುಗಿದಿದ್ದು, ಈ ಹಂತದಲ್ಲಿ ಕೋರ್ಟ್ ಹಸ್ತಕ್ಷೇಪ ಮಾಡುವುದು ಸರಿಯಲ್ಲ ಎಂದು ನ್ಯಾಯಮೂರ್ತಿ ಕೆ.ನಟರಾಜನ್ ಅಭಿಪ್ರಾಯಪಟ್ಟರು.‌

3 ತಿಂಗಳೊಳಗೆ ತನಿಖೆ ಪೂರ್ಣಗೊಳಿಸಿ ಅಂತಿಮ ವರದಿ ಸಲ್ಲಿಸುವಂತೆ ಸಿಬಿಐಗೆ ನ್ಯಾಯಾಲಯ ಸೂಚಿಸಿದೆ. ಈ ತೀರ್ಪಿನಿಂದ ಡಿಕೆಶಿಯವರಿಗೆ ತೀವ್ರ ಹಿನ್ನಡೆಯಾದಂತಾಗಿದೆ. ಅಕ್ಟೋಬರ್ 2, 2020ರಂದು ಸಿಬಿಐ ದಾಖಲಿಸಿದ FIR ಅನ್ನು ಡಿಕೆ ಶಿವಕುಮಾರ್ ಪ್ರಶ್ನಿಸಿ ಕೋರ್ಟ್‌ ಮೊರೆ ಹೋಗಿದ್ದರು. ಫೆಬ್ರವರಿ 2023ರಲ್ಲಿ, ವಿಚಾರಣಾ ನ್ಯಾಯಾಲಯವು ತೀರ್ಪನ್ನು ತಡೆಹಿಡಿಯಿತು. ಡಿಕೆಶಿ ಹಾಗೂ ಅವರ ಕುಟುಂಬ ಸದಸ್ಯರು 2013-2018ರ ನಡುವೆ ರೂ.74 ಕೋಟಿ ಅಕ್ರಮ ಆಸ್ತಿ ಸಂಪಾದಿಸಿದ್ದಾರೆ ಎಂದು ಸಿಬಿಐ ಅಧಿಕಾರಿಗಳು ಆರೋಪಿಸಿದ್ದಾರೆ.

ಅಂದಿನಿಂದ ಬಿಜೆಪಿಯವರು ಡಿಕೆ ಶಿವಕುಮಾರ್ ಅವರನ್ನು ಟೀಕಿಸಲು ಆರಂಭಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ ನಡುವೆ ಮಾತಿನ ಚಕಮಕಿ ನಡೆಯುತ್ತಿದೆ.

Related Articles

ಇತ್ತೀಚಿನ ಸುದ್ದಿಗಳು