Home ಬೆಂಗಳೂರು ಡೀಸೆಲ್ ಬೆಲೆ ಏರಿಕೆ ಖಂಡಿಸಿ ಹೆದ್ದಾರಿ ತಡೆ – ವಾಟಾಳ್ ನಾಗರಾಜ್ ಬಂಧನ

ಡೀಸೆಲ್ ಬೆಲೆ ಏರಿಕೆ ಖಂಡಿಸಿ ಹೆದ್ದಾರಿ ತಡೆ – ವಾಟಾಳ್ ನಾಗರಾಜ್ ಬಂಧನ

ಬೆಂಗಳೂರು: ಅಡುಗೆ ಅನಿಲ, ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ಹಾಗೂ ಕನ್ನಡ ಭಾಷೆ ಮತ್ತು ಸರ್ಕಾರಿ ಶಾಲೆಗಳ ಉಳಿವಿಗೆ ಒತ್ತಾಯಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಂದು ಪ್ರತಿಭಟನೆ ನಡೆಯಿತು.

ಬೆಂಗಳೂರು ಜಿಲ್ಲೆಯ ಆನೇಕಲ್ ತಾಲ್ಲೂಕಿನ ಅತ್ತಿಬೆಲೆ ಗಡಿಯಲ್ಲಿ ಹೊಸೂರು ಹೆದ್ದಾರಿಯನ್ನು ತಡೆದು ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಭಾಗವಹಿಸಿದವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ವಾಟಾಳ್ ನಾಗರಾಜ್, ಇರಾನ್–ಇಸ್ರೇಲ್–ಅಮೆರಿಕ ನಡುವಿನ ಸಂಘರ್ಷದಿಂದ ಅಡುಗೆ ಅನಿಲ ಸಿಲಿಂಡರ್ ಕೊರತೆ ಉಂಟಾಗಿದ್ದು, ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆಯಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಅಭಾವದಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ ಎಂದು ಆರೋಪಿಸಿದರು.

ಸರ್ಕಾರಗಳು ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ವಿಫಲವಾಗಿವೆ ಎಂದು ಟೀಕಿಸಿದ ಅವರು, ಇದೇ ಸ್ಥಿತಿ ಮುಂದುವರೆದರೆ ಕರ್ನಾಟಕ ಬಂದ್‌ಗೆ ಕರೆ ನೀಡುವುದಾಗಿ ಎಚ್ಚರಿಕೆ ನೀಡಿದರು. ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಪೊಲೀಸರು ವಾಟಾಳ್ ನಾಗರಾಜ್ ಅವರನ್ನು ವಶಕ್ಕೆ ಪಡೆದು ಕರೆದೊಯ್ದರು.

You cannot copy content of this page

Exit mobile version