Tuesday, July 16, 2024

ಸತ್ಯ | ನ್ಯಾಯ |ಧರ್ಮ

ಭೂಕುಸಿತ : ಹೊನ್ನಾವರ-ಬೆಂಗಳೂರು ಸಂಚಾರ ನಿಲುಗಡೆ! ‌

ಕಾರವಾರ: ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಯು ರಾಜ್ಯದ ಎಲ್ಲೆಡೆ ಅವಾಂತರಗಳನ್ನು ಸೃಷ್ಟಿಸುತ್ತಿದೆ. ಈಗ ಅದಕ್ಕೆ ಹೊಸ ಸೇರ್ಪಡೆಯಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಉಂಟಾಗಿ ಸಂಚಾರಕ್ಕೆ ಅಡಚಣೆಯಾಗಿದೆ.

ಕಳೆದೆರಡು ವಾರಗಳಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು ಜನಜೀವನ ಅಸ್ಥವ್ಯಸ್ಥಗೊಂಡಿದೆ. ಜಿಲ್ಲೆಯ ಹಲವೆಡೆ ಗುಡ್ಡ ಜರಿದು ಬೀಳುತ್ತಿದೆ.

ನಿರಂತರ ಮಳೆಗೆ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಗುಡ್ಡ ಕುಸಿದ ಹಿನ್ನೆಲೆಯಲ್ಲಿ ರಸ್ತೆ ಸಂಚಾರ ಬಂದ್‌ ಆಗಿದ್ದು, ಕಿಲೋಮೀಟರುಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿವೆ.

ಹೊನ್ನಾವರ ತಾಲೂಕಿನ ವರ್ನಕೇರಿ ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಗುಡ್ಡ ಕುಸಿದಿದ್ದು, ಬೃಹತ್ ಬಂಡೆಗಳು ರಸ್ತೆ ಮೇಲೆ ಬಿದ್ದಿವೆ. ಹೊನ್ನಾವರ-ಸಾಗರ-ಬೆಂಗಳೂರು ರಸ್ತೆ ಸಂಪೂರ್ಣ ಬಂದ್ ಆಗಿದೆ. ಬೆಳಗ್ಗೆಯಿಂದಲೇ ವಾಹನಗಳ ಸಂಚಾರ ಸ್ಥಗಿತಗೊಂಡಿದ್ದು, ವಾಹನ ಸವಾರರು ಪರದಾಟ ನಡೆಸಿದ್ದಾರೆ.

ಮಳೆಯ ಕಾರಣವಾಗಿ ತ್ರಿವಳಿ ಕರಾವಳಿ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಜಿಲ್ಲಾಡಳಿತ ಪ್ರವಾಹ ಪೀಡಿತ ಪ್ರದೇಶಗಳಿಗೆ ಎಚ್ಚರಿಕೆಯಿಂದ ಇರುವಂತೆ ತಿಳಿಸಿದೆ.

Related Articles

ಇತ್ತೀಚಿನ ಸುದ್ದಿಗಳು