Home ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ KEA ಪರೀಕ್ಷೆಯಲ್ಲಿ ಹಿಜಾಬ್ ಧರಿಸಲು ಅನುಮತಿ

KEA ಪರೀಕ್ಷೆಯಲ್ಲಿ ಹಿಜಾಬ್ ಧರಿಸಲು ಅನುಮತಿ

0

ಅಕ್ಟೋಬರ್ 28 ಮತ್ತು 29 ರಂದು ವಿವಿಧ ನಿಗಮ ಮಂಡಳಿಗಳ ಹುದ್ದೆಗಳ ಭರ್ತಿಗೆ ನಡೆಯಲಿರುವ ಪರೀಕ್ಷೆಗೆ ಹಿಜಾಬ್ ಧರಿಸಿ ಹಾಜರಾಗಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅನುಮತಿ ನೀಡಿದೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ಹಿಜಾಬ್ ಗಲಾಟೆ ಮುನ್ನೆಲೆಗೆ ಬಂದು ರಾಷ್ಟ್ರ ಮಟ್ಟದಲ್ಲಿ ದೊಡ್ಡ ಚರ್ಚೆಗೆ ಗ್ರಾಸವಾಗಿತ್ತು. ಅಷ್ಟೆ ಅಲ್ಲದೆ ಮುಸ್ಲಿಂ ವಿದ್ಯಾರ್ಥಿನಿಯರು ಎಷ್ಟೋ ಮಂದಿ ಆ ವರ್ಷ ಕಾಲೇಜಿಗೆ ಹೋಗದಂತೆ ನಿರ್ಧರಿಸಿದ್ದು ಈ ಸಂದರ್ಭದಲ್ಲಿ ನೆನೆಸಿಕೊಳ್ಳಬಹುದು.

ಇದೀಗ ಕೆಇಎ ವಿವಿಧ ನಿಗಮ ಮಂಡಳಿಗಳ ಹುದ್ದೆ ಪರೀಕ್ಷೆಗೆ ಹಿಜಾಬ್ ಧರಿಸಲು ಅವಕಾಶ ನೀಡಿದೆ. ಪರೀಕ್ಷೆಗೆ ಅಭ್ಯರ್ಥಿಗಳು ಒಂದು ಗಂಟೆ ಮೊದಲು ಪರೀಕ್ಷಾ ಕೇಂದ್ರದಲ್‌ಇ ಹಾಜರಿರಬೇಕು. ಅವರನ್ನು ಮಹಿಳಾ ಸಿಬ್ಬಂದಿ ತಪಾಸಣೆ ನಡೆಸಲಿದ್ದಾರೆ ಎಂದು ಕೆಇಎ ತಿಳಿಸಿದೆ.

ಪರೀಕ್ಷೆಗೆ ಹಾಜರಾಗುವವರು ಪ್ರವೇಶ ಪತ್ರ, ಇತ್ತೀಚಿನ ಪಾಸ್ ಪೋರ್ಟ್ ಅಳತೆಯ 2 ಫೋಟೋ, ಸರ್ಕಾರದ ಮಾನ್ಯ ಮಾಡಿರುವ ಗುರುತಿನ ಚೀಟಿ ತರಬೇಕು. ಪರೀಕ್ಷೆ ಮುಗಿಯುವವರೆಗೂ ಹೊರ ಹೋಗಲು ಅವಕಾಶವಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

You cannot copy content of this page

Exit mobile version