Home ಇನ್ನಷ್ಟು ಕೋರ್ಟು - ಕಾನೂನು ಹಿಜಾಬ್ ನಿಷೇಧ: ಇಂದು ಸುಪ್ರೀಂ ವಿಚಾರಣೆ

ಹಿಜಾಬ್ ನಿಷೇಧ: ಇಂದು ಸುಪ್ರೀಂ ವಿಚಾರಣೆ

0

ಹೊಸದೆಹಲಿ: ಕಾಲೇಜು ಕ್ಯಾಂಪಸ್‌ಗಳಲ್ಲಿ ಹಿಜಾಬ್ ಮೇಲಿನ ನಿಷೇಧವನ್ನು ಎತ್ತಿಹಿಡಿದ ಬಾಂಬೆ ಹೈಕೋರ್ಟ್ ತೀರ್ಪನ್ನು ಶುಕ್ರವಾರ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ಡ್ರೆಸ್ ಕೋಡ್‌ನ ಮಾರ್ಗಸೂಚಿಗಳಿಂದ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳು ತೊಂದರೆಗಳನ್ನು ಎದುರಿಸುತ್ತಿದ್ದಾರೆ ಎನ್ನುವ ಅರ್ಜಿದಾರರ ವಾದವನ್ನು ಪರಿಶೀಲಿಸಿತು.

ಅವಧಿ ಪರೀಕ್ಷೆಗಳು ಆರಂಭವಾಗಲಿರುವ ಕಾರಣ ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸಬೇಕು ಎಂಬ ವಾದವನ್ನೂ ಒಪ್ಪಿಕೊಂಡಿದೆ. ಶುಕ್ರವಾರ ವಿಚಾರಣೆ ನಡೆಸಲಾಗುವುದು ಎಂದು ಪೀಠ ಹೇಳಿದೆ. ಕಾಲೇಜು ಆವರಣದಲ್ಲಿ ಹಿಜಾಬ್ ಅನ್ನು ನಿಷೇಧಿಸಲು ಚೆಂಬೂರ್ ಟ್ರಾಂಬೆ ಎಜುಕೇಶನ್ ಸೊಸೈಟಿ ತೆಗೆದುಕೊಂಡ ನಿರ್ಧಾರವನ್ನು ಬಾಂಬೆ ಹೈಕೋರ್ಟ್ ಜೂನ್ 26ರಂದು ಎತ್ತಿಹಿಡಿದಿದೆ.

ಮತ್ತೊಂದೆಡೆ, ಕರ್ನಾಟಕ ಹೈಕೋರ್ಟ್ ಕೂಡ ಕಾಲೇಜುಗಳಲ್ಲಿ ಹಿಜಾಬ್ ನಿಷೇಧಿಸಿ ರಾಜ್ಯ ಸರ್ಕಾರ ತೆಗೆದುಕೊಂಡ ನಿರ್ಧಾರವನ್ನು ಎತ್ತಿಹಿಡಿದಿದೆ. ಈ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಗಳೂ ಸಲ್ಲಿಕೆಯಾಗಿದ್ದವು. ಆದರೆ, ಈ ಕುರಿತು ತೀರ್ಮಾನಿಸಲು ಸುಪ್ರೀಂ ಕೋರ್ಟ್ ಇನ್ನೂ ವಿಶಾಲ ಪೀಠವನ್ನು ರಚಿಸಿಲ್ಲ. ಈ ಹಿನ್ನೆಲೆಯಲ್ಲಿ ಬಾಂಬೆ ಹೈಕೋರ್ಟ್ ತೀರ್ಪಿನ ವಿಚಾರಣೆ ನಡೆಸಿರುವುದು ಮಹತ್ವ ಪಡೆದುಕೊಂಡಿದೆ.

You cannot copy content of this page

Exit mobile version