ಹಾಸನ : ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರು ಶಸ್ತ್ರಚಿಕಿತ್ಸೆಯನ್ನು ಸಮರ್ಪಕವಾಗಿ ನಿರ್ವಹಿಸದೆ ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದಾರೆ ಎಂದು ದಲಿತ ಸಂಘಟನೆಗಳ ಒಕ್ಕೂಟದ ಮುಖಂಡ ದಿನೇಶ್ ಆರೋಪಿಸಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅರಕಲಗೂಡು ತಾಲೂಕಿನ ಪೂರ್ಣಿಮಾ ಮತ್ತು ಮಂಜಯ್ಯ ದಂಪತಿಯ ಪುತ್ರಿ ಹಿಂದೂ ಶ್ರೀ (ಪಿಯುಸಿ ವಿದ್ಯಾರ್ಥಿನಿ) ಅಪೆಂಡಿಕ್ಸ್ ಸಮಸ್ಯೆಯಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಹಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಸೂಕ್ತ ಚಿಕಿತ್ಸೆ ನೀಡದೆ ವೈದ್ಯರು ಉದಾಸೀನವಾಗಿ ವರ್ತಿಸಿದ್ದಾರೆ ಎಂದು ದೂರಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅರಕಲಗೂಡು ತಾಲೂಕಿನ ಪೂರ್ಣಿಮಾ ಮತ್ತು ಮಂಜಯ್ಯ ದಂಪತಿಯ ಪುತ್ರಿ ಹಿಂದೂ ಶ್ರೀ (ಪಿಯುಸಿ ವಿದ್ಯಾರ್ಥಿನಿ) ಅಪೆಂಡಿಕ್ಸ್ ಸಮಸ್ಯೆಯಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಹಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಸೂಕ್ತ ಚಿಕಿತ್ಸೆ ನೀಡದೆ ವೈದ್ಯರು ಉದಾಸೀನವಾಗಿ ವರ್ತಿಸಿದ್ದಾರೆ ಎಂದು ದೂರಿದರು. ಇತ್ತೀಚಿನ ದಿನಗಳಲ್ಲಿ ಆಸ್ಪತ್ರೆಯಲ್ಲಿ ಸ್ವಚ್ಛತೆಗೆ ಪ್ರಾಮುಖ್ಯತೆ ನೀಡಲಾಗುತ್ತಿಲ್ಲ. ಹಿರಿಯ ವೈದ್ಯರು ಮೇಲ್ವಿಚಾರಣೆಯನ್ನು ಕಿರಿಯ ವೈದ್ಯರಿಗೆ ಬಿಟ್ಟುಕೊಡುವುದು ಖಂಡನೀಯ ಎಂದು ಹೇಳಿದರು. ಖಾಸಗಿ ಆಸ್ಪತ್ರೆಗಳಲ್ಲಿ ಕನಿಷ್ಠ ಒಪಿಡಿ ಶುಲ್ಕವನ್ನು ಕಡಿಮೆ ಮಾಡುವಂತೆ ಸಂಬಂಧಿತ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ವಿಠಲ್, ಚಂದ್ರಣ್ಣ, ಜಗಣ್ಣ ಹಾಗೂ ದೇವರಾಜು ಉಪಸ್ಥಿತರಿದ್ದರು
