Saturday, June 29, 2024

ಸತ್ಯ | ನ್ಯಾಯ |ಧರ್ಮ

‘ಹಿಂದೂಗಳ ಏರಿಯಾಕ್ಕೆ ಸಿದ್ದರಾಮಯ್ಯ ಬಂದಿದ್ದೇಕೆ’? : ಬಿಜೆಪಿ ಟೀಕೆ

ಬೆಂಗಳೂರು: ‘ಮುಸಲ್ಮಾನರ ಏರಿಯಾದಲ್ಲಿ ಸಾವರ್ಕರ್‌ ಬ್ಯಾನರ್‌ ಹಾಕಿದ್ದೇಕೆ’ ಎಂದು ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ. ಅವರದೇ ಮಾತನ್ನು ಅನುಸರಿಸಿದ ಕೊಡಗಿನ ಜನತೆ  ‘ಹಿಂದೂಗಳ ಏರಿಯಾಕ್ಕೆ ಸಿದ್ದರಾಮಯ್ಯ ಬಂದಿದ್ದೇಕೆ’ ಎಂದು ಪ್ರತಿಭಟಿಸಿದ್ದಾರೆ ಎಂದು ಬಿಜೆಪಿ ಟೀಕಿಸಿದೆ.

ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ  ಶಿವಮೊಗ್ಗ ನಗರದ ಅಮೀರ್‌ ಅಹ್ಮದ್‌ ಸರ್ಕಲ್‌ನಲ್ಲಿ ವಿ ಡಿ ಸಾವರ್ಕರ್‌ ಬ್ಯಾನರ್‌ ಹಾಕಲಾಗಿತ್ತು, ಈ ಕಾರಣ ಅವರೇನು ಸ್ವಾತಂತ್ರ್ಯ ಹೋರಾಟಗಾರರಲ್ಲ ಎಂದು ಅವರ ಬ್ಯಾನರ್‌ ತೆರವುಗೊಳಿಸಿದ ಘಟನೆ ನಡಿದಿದೆ. ಈ ಘಟನೆಯಿಂದ  ಎರೆಡು ಸಮುದಾಯಗಳ ನಡುವೆ ಕೋಮುವಾದ ಉಂಟಾಗಿ ನಗರದಲ್ಲಿ ಅಶಾಂತಿ ಸೃಷ್ಟಿಯಾಗಿತ್ತು.

ಈ ಕುರಿತು ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಸಲ್ಮಾನರ ಏರಿಯಾದಲ್ಲಿ ಸಾವರ್ಕರ್‌ ಬ್ಯಾನರ್‌ ಹಾಕಿದ್ದೇಕೆ ಎಂದು ಪ್ರಶ್ನಿಸಿದ್ದರು. ಈ ಮಾತನ್ನ ಅನುಸರಿಸಿದ ಕೊಡಗಿನ ಜನತೆ, ಗುರುವಾರ ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳನ್ನು ಸಿದ್ದರಾಮಯ್ಯ ವೀಕ್ಷಿಸಲು ಬಂದಾಗ,  ಬಿಜೆಪಿ ಕಾರ್ಯಕರ್ತರು ಘೇರಾವ್ ಹಾಕಿದ್ದರು ಮತ್ತು ಕಪ್ಪು ಬಾವುಟ ಪ್ರದರ್ಶಿಸಿ ಅವರು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಕೋಳಿಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದರು. ನಂತರ ಹಿಂದೂಗಳ ಏರಿಯಾಕ್ಕೆ ಸಿದ್ದರಾಮಯ್ಯ ಬಂದಿದ್ದೇಕೆ, ಗೋ ಬ್ಯಾಕ್‌ ಸಿದ್ದರಾಮಯ್ಯ ಎಂದು ಘೋಷಣೆ ಕೂಗಿದರು.

ಈ ಘಟನೆ ಕುರಿತು ಟ್ವೀಟ್‌ ಮಾಡುವ ಮೂಲಕ ಸಿದ್ದರಾಮಯ್ಯನವರನ್ನು ಪ್ರಶ್ನಿನಿಸಿದ ಬಿಜೆಪಿ ಇದಕ್ಕೆ ನಿಮ್ಮಲ್ಲಿ ಉತ್ತರವಿದೆಯೇ? ಎಂದು ಟೀಕಿಸಿದೆ.

Related Articles

ಇತ್ತೀಚಿನ ಸುದ್ದಿಗಳು