Home ಬ್ರೇಕಿಂಗ್ ಸುದ್ದಿ ಹಿಂದಿ ದಿವಸಕ್ಕೆ ಆಕ್ರೋಶ: ನಾಳೆ ರಾಜ್ಯಾದ್ಯಂತ ಪ್ರತಿಭಟನೆ, ಟ್ವಿಟರ್ ಅಭಿಯಾನ

ಹಿಂದಿ ದಿವಸಕ್ಕೆ ಆಕ್ರೋಶ: ನಾಳೆ ರಾಜ್ಯಾದ್ಯಂತ ಪ್ರತಿಭಟನೆ, ಟ್ವಿಟರ್ ಅಭಿಯಾನ

0

ಬೆಂಗಳೂರು: ಕೇಂದ್ರ ಸರ್ಕಾರ ಪ್ರತಿವರ್ಷ ಸೆಪ್ಟೆಂಬರ್ 14ರಂದು ನಡೆಸುವ ಹಿಂದಿ ದಿವಸ ಆಚರಣೆಗೆ ರಾಜ್ಯಾದ್ಯಂತ ಆಕ್ರೋಶದ ಅಲೆ ವ್ಯಕ್ತವಾಗುತ್ತಿದ್ದು, ನಾಳೆ ರಾಜ್ಯಾದ್ಯಂತ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಲಿವೆ.

ಕನ್ನಡಿಗರ ತೆರಿಗೆ ಹಣದಿಂದ ನಡೆಸುವ ಹಿಂದಿ ದಿವಸ ಆಚರಣೆ ಕನ್ನಡಿಗರಿಗೆ ಯಾಕಾಗಿ ಬೇಕು? ಹಿಂದಿ ಹೇರಿಕೆ ಸಹಿಸುವುದಿಲ್ಲ ಎಂದು ಕನ್ನಡಪರ ಸಂಘಟನೆಗಳು ಕಿಡಿಕಾರಿವೆ.

ಟ್ವಿಟರ್ ಅಭಿಯಾನ:

ನಾಳೆ ಬೆಳಿಗ್ಗೆ 10ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಕರ್ನಾಟಕ ರಕ್ಷಣಾ ವೇದಿಕೆ ಟ್ವಿಟರ್ ಅಭಿಯಾನಕ್ಕೆ ಕರೆ ನೀಡಿದೆ. #StopHindiImposition #ಹಿಂದಿಹೇರಿಕೆನಿಲ್ಲಿಸಿ ಎಂಬ ಹ್ಯಾಶ್ ಟ್ಯಾಗ್ ಗಳನ್ನು ಬಳಸಿ ಟ್ವೀಟ್ ಮಾಡಲು ಕರವೇ ಮನವಿ ಮಾಡಿದೆ.
ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾದ್ಯಂತ ಎಲ್ಲ ಜಿಲ್ಲಾಕೇಂದ್ರಗಳಲ್ಲೂ ಪ್ರತಿಭಟನೆಗಳನ್ನು ಹಮ್ಮಿಕೊಂಡಿದ್ದು, ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡರ ನೇತೃತ್ವದಲ್ಲಿ ಧರಣಿ ಹಮ್ಮಿಕೊಳ್ಳಲಾಗಿದೆ.

ಎಚ್.ಡಿ.ಕುಮಾರಸ್ವಾಮಿ ಕಿಡಿ:
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಿಂದಿ ದಿವಸ ಆಚರಣೆಗೆ ವಿರೋಧ ವ್ಯಕ್ತಪಡಿಸಿದ್ದು, ಆಚರಣೆಯನ್ನು ಕೈಬಿಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದಿದ್ದಾರೆ.

ಹಿಂದಿದಿವಸವನ್ನು ಅವರು ಹಿಂದಿರಾಜ್ಯಗಳಲ್ಲಿ ಆಚರಿಸಿಕೊಳ್ಳಲಿ. ನಮಗೆ ಅದರ ಅವಶ್ಯಕತೆ ಇಲ್ಲ. 2,500 ವರ್ಷಗಳ ಇತಿಹಾಸವಿರುವ ಕನ್ನಡ ನುಡಿಹಬ್ಬವನ್ನು ಹಿಂದಿಭಾಷಿಕರು ಆಚರಿಸುತ್ತಾರೆಯೇ? ಕೇವಲ 400 ವರ್ಷಗಳ ಇತಿಹಾಸದ ಹಿಂದಿಯ ದಿನವನ್ನು ನಾವೇಕೆ ಆಚರಿಸಬೇಕು ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.

You cannot copy content of this page

Exit mobile version