Home ರಾಜ್ಯ ಹಿಂದೂ ಸಂಘಟನೆಗಳ ಪ್ರತಿಭಟನೆ ರಾಜಕೀಯ ಪ್ರೇರಿತ; ಪ್ರಾಣಿ ಹಿಂಸೆ ಮಾಡುವುದು ಅಪರಾಧ, ತಪ್ಪಿತಸ್ಥರಿಗೆ ಶಿಕ್ಷೆ- ಮುಖ್ಯಮಂತ್ರಿ...

ಹಿಂದೂ ಸಂಘಟನೆಗಳ ಪ್ರತಿಭಟನೆ ರಾಜಕೀಯ ಪ್ರೇರಿತ; ಪ್ರಾಣಿ ಹಿಂಸೆ ಮಾಡುವುದು ಅಪರಾಧ, ತಪ್ಪಿತಸ್ಥರಿಗೆ ಶಿಕ್ಷೆ- ಮುಖ್ಯಮಂತ್ರಿ ಸಿದ್ದರಾಮಯ್ಯ

0

ವಿಜಯನಗರ, ಡಿಸೆಂಬರ್ 12: ಚಾಮರಾಜಪೇಟೆಯಲ್ಲಿ ದನಗಳಿಗೆ ಹಿಂಸೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಾಣಿ ಹಿಂಸೆ ಮಾಡುವುದು ಅಪರಾಧ, ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಶಿಕ್ಷೆಗೆ ಒಳಪಡಿಸಲಾಗುವುದು ಎಂದು ತಿಳಿಸಿದರು.

ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಗಳ ಪ್ರತಿಭಟನೆ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ತಪ್ಪಿತಸ್ಥರ ಮಾಹಿತಿ ದೊರೆತಿಲ್ಲ. ಪೊಲೀಸ್ ಆಯುಕ್ತರು ತಪ್ಪಿತಸ್ಥರನ್ನು ಪತ್ತೆ ಹಚ್ಚಿ , ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸೂಚಿಸಲಾಗಿದೆ. ಹಿಂದೂ ಸಂಘಟನೆಗಳ ಪ್ರತಿಭಟನೆ ರಾಜಕೀಯ ಪ್ರೇರಿತವಾಗಿದೆ ಎಂದು ತಿಳಿಸಿದರು.

ಜಾತಿಗಣತಿ ವರದಿ ಜಾರಿ- ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ

ಜಾತಿಗಣತಿ ವರದಿಗೆ ವಿರೋಧ ವ್ಯಕ್ತವಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಜಾತಿ ಗಣತಿ ವರದಿಗಳ ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾಗುವುದು ಸಹಜ. 160 ಕೋಟಿ ರೂ. ವೆಚ್ಚದಲ್ಲಿ ಸಿದ್ದಪಡಿಸಲಾದ ವರದಿಯನ್ನು ಸ್ವೀಕರಿಸಲಾಗಿದ್ದು, ವರದಿಯ ಜಾರಿಯ ಬಗ್ಗೆ ತೀರ್ಮಾನ ಕೈಗೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು ಎಂದರು.

You cannot copy content of this page

Exit mobile version