Monday, July 28, 2025

ಸತ್ಯ | ನ್ಯಾಯ |ಧರ್ಮ

ಹಿರಿಯ ನಟ ಲೋಹಿತಾಶ್ವ ಅವರಿಗೆ ಹೃದಯಾಘಾತ

ಕನ್ನಡದ ಹಿರಿಯ ಚಿತ್ರನಟ ಮತ್ತು ರಂಗಕರ್ಮಿ ಲೋಹಿತಾಶ್ವ ಅವರಿಗೆ ಭಾನುವಾರ ಹೃದಯಾಘಾತವಾಗಿದ್ದು ಕುಮಾರಸ್ವಾಮಿ ಲೇಔಟಿನ ಅಪೋಲೊ ಆಸ್ಪತ್ರೆಗೆ ಸೇರಿಸಲಾಗಿದೆ. ವಯೋಸಹಜ ಕಾಯಿಲೆಗಳಿಂದಲೂ ಬಳಲುತ್ತಿದ್ದ ಅವರು ಚಿಕಿತ್ಸೆಗೆ ಹೇಗೆ ಸ್ಪಂದಿಸುತ್ತಿದ್ದಾರೆನ್ನುವುದು ಇನ್ನಷ್ಟೇ ತಿಳಿದು ಬರಬೇಕಾಗಿದೆ.

ಹಿರಿಯ ನಟರಾದ ಲೋಹಿತಾಶ್ವ ತಮ್ಮ ಗಡಸು ಧ್ವನಿಯಿಂದಲೇ ಎಲ್ಲರಿಗಿಂತಲೂ ಭಿನ್ನವಾಗಿ ಗುರುತಿಸಿಕೊಂಡಿದ್ದರು. ಮಾನಸಗಂಗೋತ್ರಿಯಿಂದ ಇಂಗ್ಲಿಷ್‌ ಸಾಹಿತ್ಯದಲ್ಲಿ ಎಮ್‌ ಎ ಪದವಿ ಪಡೆದಿರುವ ಅವರು ಇಂಗ್ಲಿಷ್‌ ಪ್ರಾಧ್ಯಾಪಕಾರಗಿಯೂ ಸೇವೆ ಸಲ್ಲಿಸಿದ್ದರು. ಸುಮಾರು ಐನೂರಕ್ಕೂ ಮಿಕ್ಕಿ ಚಿತ್ರಗಳಲ್ಲಿ ನಟಿಸಿರುವ ಅವರು ಅನೇಕ ಖ್ಯಾತ ನಾಟಕಗಳಲ್ಲಿಯೂ ನಟಿಸಿದ್ದಾರೆ.

ಹಿರಿಯ ನಟ ಬೇಗನೆ ಗುಣಮುಖರಾಗಿ ಮನೆಗೆ ಮರಳಲಿ ಎಂದು ಪೀಪಲ್‌ ಮೀಡಿಯಾ ಸಂಸ್ಥೆ ಹಾರೈಸುತ್ತದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page