Home ರಾಜ್ಯ ಗ್ಯಾರಂಟಿ ಯೋಜನೆ ಮಾದರಿಯಲ್ಲಿ ಬರುತ್ತಿದೆ ‘ಗೃಹ ಆರೋಗ್ಯ’!

ಗ್ಯಾರಂಟಿ ಯೋಜನೆ ಮಾದರಿಯಲ್ಲಿ ಬರುತ್ತಿದೆ ‘ಗೃಹ ಆರೋಗ್ಯ’!

0

ಗ್ಯಾರಂಟಿ ಯೋಜನೆಗಳ ಮಾದರಿಯಲ್ಲೇ ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ಹೊಸ ಯೋಜನೆಯನ್ನು ಜಾರಿಗೆ ತರಲು ಕರ್ನಾಟಕ ಸರ್ಕಾರ ಚಿಂತನೆ ನಡೆಸಿದೆ.

‘ಗೃಹ ಆರೋಗ್ಯ’ ಎಂಬ ಹೆಸರಿನಲ್ಲಿ ಜಾರಿಗೆ ಬರಬಹುದಾದ ಈ ಯೋಜನೆಯಲ್ಲಿ ಆರೋಗ್ಯ ಸಿಬ್ಬಂದಿ ಎಲ್ಲಾ ಮನೆಗಳಿಗೆ ಭೇಟಿ ನೀಡಿ ಎಲ್ಲಾ ಕುಟುಂಬ ಸದಸ್ಯರನ್ನು ತಪಾಸಣೆ ನಡೆಸಲಿದ್ದಾರೆ. ಈ ಬಗ್ಗೆ ತಿಳಿಸಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇದೂ ಕೂಡ ಗೃಹಲಕ್ಷ್ಮಿ, ಗೃಹಜ್ಯೋತಿಯಂತಹ ಗ್ಯಾರಂಟಿ ಯೋಜನೆಗಳ ಮಾದರಿಯಲ್ಲಿ ನಡೆಯುವ ಹೊಸ ಯೋಜನೆಗೆ ಸಿದ್ಧತೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಪ್ರಾಯೋಗಿಕವಾಗಿ 8 ಜಿಲ್ಲೆಗಳಲ್ಲಿ ಇದನ್ನು ಜಾರಿಗೊಳಿಸಲಿದ್ದು, ನಂತರ ಉಳಿದ ಜಿಲ್ಲೆಗಳಲ್ಲಿಯೂ ವಿಸ್ತರಿಸಲಾಗುವುದು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಈ ಬಗ್ಗೆ ಯೋಜನೆ ರೂಪಿಸಲಾಗಿದೆ. ಸಮಸ್ಯೆ ಉಲ್ಬಣಿಸಿದ ನಂತರ ಚಿಕಿತ್ಸೆ ನೀಡುವ ಬದಲಿಗೆ ರೋಗ ಕಾಣಿಸಿಕೊಳ್ಳುವ ಪೂರ್ವದಲ್ಲೇ ತಪಾಸಣೆ ನಡೆಸಿ ಚಿಕಿತ್ಸೆ ನೀಡುವ ಉದ್ದೇಶ ಹೊಂದಲಾಗಿದೆ.

ಪ್ರತಿಯೊಬ್ಬರ ಮನೆ ಬಾಗಿಲಿಗೆ ವೈದ್ಯರನ್ನು ಕಳುಹಿಸಿ ಆರೋಗ್ಯ ತಪಾಸಣೆ ನಡೆಸಲಾಗುವುದು. ಆಯ್ದ ಸಮಸ್ಯೆಗಳಿಗೆ ಉಚಿತವಾಗಿ ಔಷಧಿ ಒದಗಿಸುವ ‘ಗೃಹ ಆರೋಗ್ಯ’ ಯೋಜನೆ ಜಾರಿಗೆ ಸರ್ಕಾರ ಮುಂದಾಗಿದೆ.

ಈ ಯೋಜನೆ ಅಡಿಯಲ್ಲಿ ಬಿಪಿ, ಮಧುಮೇಹ ಸೇರಿದಂತೆ ಸಣ್ಣಪುಟ್ಟ ಕಾಯಿಲೆಗಳಿಗೆ ಸ್ಥಳದಲ್ಲೇ ಔಷಧ ನೀಡಲಿದ್ದು, ಸಂಕೀರ್ಣ ಕಾಯಿಲೆಗಳನ್ನು ಪತ್ತೆ ಹಚ್ಚಿ ಗಂಭೀರ ಸಮಸ್ಯೆ ಇರುವವರನ್ನು ಗುರುತಿಸಿ ಸೂಕ್ತ ಚಿಕಿತ್ಸೆಗೆ ಶಿಫಾರಸು ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

You cannot copy content of this page

Exit mobile version