ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ, ಭ್ರಷ್ಟ ಅಧಿಕಾರಿಗಳ ಮನೆ ದಾಖಲೆ ಪರಿಶೀಲನೆ

ರಾಜ್ಯದ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಶಾಕ್ ನೀಡಿದ್ದಾರೆ. ರಾಜ್ಯದ ಹಲವು ಕಡೆಗಳಲ್ಲಿ ಅಧಿಕಾರಿಗಳ ಮನೆ, ಕಛೇರಿಗೆ ಭೇಟಿ ನೀಡಿ ದಾಖಲೆ ಪರಿಶೀಲನೆ ನಡೆಸಿದ್ದಾರೆ.

ಬಾಗಲಕೋಟೆ, ಬೆಳಗಾವಿ, ರಾಯಚೂರು ಸೇರಿ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂ ಬೆಳಗ್ಗೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಬಾಗಲಕೋಟೆಯಲ್ಲಿ ಪಿಡಿಒ ಎಸ್.ಪಿ. ಹಿರೇಮಠ ಅವರ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಬಾಗಲಕೋಟೆಯ ವಿದ್ಯಾಗಿರಿಯಲ್ಲಿರುವ ಹೊಲಗೇರಿ ಗ್ರಾಮ ಪಂಚಾಯಿತಿ ಪಿಡಿಒ ಹಿರೇಮಠ ನಿವಾಸದ ಮೇಲೆ ದಾಳಿ ನಡೆಸಲಾಗಿದೆ.

ಲೋಕಾಯುಕ್ತ ಡಿವೈಎಸ್ಪಿ ಸಿದ್ದೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಐಷಾರಾಮಿ ಮನೆ, ಅಪಾರ ಪ್ರಮಾಣದ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಹಿರೇಮಠ ನಿವಾಸದ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಇನ್ನೂ, ರಾಯಚೂರು, ಬೆಳಗಾವಿಯಲ್ಲೂ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳ ಚಳಿ ಬಿಡಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು