Monday, March 24, 2025

ಸತ್ಯ | ನ್ಯಾಯ |ಧರ್ಮ

ರಾಜ್ಯದ ಹನಿಟ್ರ್ಯಾಪ್‌ ಪ್ರಕರಣ: ಸುಪ್ರೀಂಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ

ಹೊಸದಿಲ್ಲಿ : ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಹನಿಟ್ರ್ಯಾಪ್‌ ಪ್ರಕರಣ ಕುರಿತು ತನಿಖೆಗೆ ಆಗ್ರಹಿಸಿ ಸುಪ್ರೀಂ ಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದು ಸಲ್ಲಿಸಲ್ಪಟ್ಟಿದೆ. ಬಿನಯ್ ಕುಮಾರ್ ಸಿಂಗ್‌ ಎಂಬವರ ಪರವಾಗಿ ವಕೀಲ ಬರುಣ್ ಕುಮಾರ್ ಅರ್ಜಿ ಸಲ್ಲಿಸಿದ್ದಾರೆ.

ರಾಜ್ಯದ ಜನತೆಯ ಗೊಂದಲಕ್ಕೆ ಕಾರಣವಾಗಿರುವ ಈ ಪ್ರಕರಣದ ವಿಚಾರಣೆಯನ್ನು ಕೂಡಲೇ ಕೈಗೆತ್ತಿಕೊಳ್ಳಬೇಕೆಂದು ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಎದುರು ಅರ್ಜಿದಾರರು ಮನವಿ ಮಾಡಿದ್ದಾರೆ. ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಳ್ಳಲು ಸುಪ್ರೀಂಕೋರ್ಟ್​ ಒಪ್ಪಿಗೆ ನೀಡಿದೆ.

ವಿಧಾನಸಭೆ ಅಧಿವೇಶನದಲ್ಲಿ ಸಚಿವ ಕೆ.ಎನ್.ರಾಜಣ್ಣ ಅವರು ಹನಿಟ್ರ್ಯಾಪ್​ನಲ್ಲಿ ತಮ್ಮನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಬಹಿರಂಗಪಡಿಸಿದ್ದರು. ಅಲ್ಲದೆ, 48 ರಾಜ್ಯ, ರಾಷ್ಟ್ರಮಟ್ಟದ ನಾಯಕರೂ ‘ಹನಿಟ್ರ್ಯಾಪ್’ಗೆ ಒಳಗಾಗಿದ್ದಾರೆ ಎಂದು ಅವರು ತಮ್ಮ ಹೇಳಿಕೆಯಲ್ಲಿ ಬಹಿರಂಗಪಡಿಸಿದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page