Home ರಾಜ್ಯ ಚಿತ್ರದುರ್ಗ ಚಿತ್ರದುರ್ಗದ ಸಾಸಲು ಬಳಿ ಭೀಕರ ಅಪಘಾತ: ಮರಕ್ಕೆ ಬೊಲೆರೊ ಡಿಕ್ಕಿ, ನಾಲ್ವರು ಸಾವು

ಚಿತ್ರದುರ್ಗದ ಸಾಸಲು ಬಳಿ ಭೀಕರ ಅಪಘಾತ: ಮರಕ್ಕೆ ಬೊಲೆರೊ ಡಿಕ್ಕಿ, ನಾಲ್ವರು ಸಾವು

0

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಸಾಸಲು ಗ್ರಾಮದ ಬಳಿ ಕಳೆದ ರಾತ್ರಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಅಡಿಕೆ ಸುಲಿಯುವ ಕೆಲಸ ಮುಗಿಸಿ ಕಾರ್ಮಿಕರು ಹಿಂತಿರುಗುತ್ತಿದ್ದ ಬೊಲೆರೊ ವಾಹನವು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ವೇಗವಾಗಿ ಡಿಕ್ಕಿ ಹೊಡೆದಿದೆ. ಈ ಭೀಕರ ಘಟನೆಯಲ್ಲಿ ಕಿರಣ್ (25), ಅರುಣ್ (32) ಮತ್ತು ಗಿರಿರಾಜ್ (46) ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಹನುಮಂತಪ್ಪ (32) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಮೃತಪಟ್ಟ ನಾಲ್ವರೂ ಕಾರ್ಮಿಕರು ದಾವಣಗೆರೆ ಜಿಲ್ಲೆಯ ಕಲ್ಲವ್ವ ನಾಗತಿಹಳ್ಳಿ ಗ್ರಾಮದವರಾಗಿದ್ದಾರೆ. ಇವರೆಲ್ಲರೂ ಮಾಯಕೊಂಡದಲ್ಲಿ ಅಡಿಕೆ ಕೆಲಸಕ್ಕೆ ಹೋಗಿ ತಮ್ಮ ಸ್ವಗ್ರಾಮಕ್ಕೆ ಮರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ಒಂದೇ ಗ್ರಾಮದ ನಾಲ್ವರು ಯುವಕರು ಅಪಘಾತದಲ್ಲಿ ಬಲಿಯಾದ ಸುದ್ದಿ ಕೇಳಿ ಗ್ರಾಮದಲ್ಲಿ ಶೋಕ ಸಾಗರ ಆವರಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಈ ಅಪಘಾತದಲ್ಲಿ ವಾಹನದಲ್ಲಿದ್ದ ಇತರ ನಾಲ್ವರು ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಚಿಕ್ಕಜಾಜೂರು ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಮೃತದೇಹಗಳನ್ನು ವಾರಸುದಾರರಿಗೆ ಹಸ್ತಾಂತರಿಸುವ ಪ್ರಕ್ರಿಯೆ ನಡೆಯುತ್ತಿದೆ.


You cannot copy content of this page

Exit mobile version