Home ಬ್ರೇಕಿಂಗ್ ಸುದ್ದಿ ನಿಮ್ಮಪ್ಪನಿಗೆ, ನಿಮಗೆ ಇನ್ನೆಷ್ಟು ವರ್ಷ ಮೀಸಲು ಕ್ಷೇತ್ರಗಳು ಬೇಕು – ಖರ್ಗೆ ವಿರುದ್ಧ ಕುಮಾರಸ್ವಾಮಿ ಗರಂ

ನಿಮ್ಮಪ್ಪನಿಗೆ, ನಿಮಗೆ ಇನ್ನೆಷ್ಟು ವರ್ಷ ಮೀಸಲು ಕ್ಷೇತ್ರಗಳು ಬೇಕು – ಖರ್ಗೆ ವಿರುದ್ಧ ಕುಮಾರಸ್ವಾಮಿ ಗರಂ

ಬೆಂಗಳೂರು: ಸ್ಟಿಂಗ್ ಆಪರೇಷನ್ ಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಕ್ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಇಂದು ಬೆಳಗ್ಗೆಯಿಂದಲೇ ಪ್ರಿಯಾಂಕ್ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿರುವ ಕುಮಾರಸ್ವಾಮಿ ಅವರು, ಇದೀಗ ಮತ್ತೊಂದು ಹೆಜ್ಜೆ ಮುಂದೆ, ‘ಬಲಿತ ದಲಿತ’ನೇ, ನಿಮಗೆ, ನಿಮ್ಮಪ್ಪನಿಗೆ ಇನ್ನೆಷ್ಟು ವರ್ಷ ಮೀಸಲು ಕ್ಷೇತ್ರಗಳು ಬೇಕು? ಎಂದು ಎಕ್ಸ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ನಡೆದ ಸ್ಟಿಂಗ್ ಸಂಚಿನಲ್ಲಿ ಶಾಮೀಲಾಗಿ ಅವರ ಪದಚ್ಯುತಿಗೆ ಕಾರಣನಾದ ನೀಲಿಕಣ್ಣಿನ ಮಂತ್ರಿ ಪ್ರಿಯಾಂಕ್ ಖರ್ಗೆ, ಸ್ಟಿಂಗ್ ಮಾಡಿದ ಅಸಲಿ ಕಿರಾತಕನನ್ನು ಬಿಟ್ಟು ಅಮಾಯಕರ ಬೆನ್ನತ್ತಿದ ನೀವು ಗೃಹಮಂತ್ರಿ ಹುದ್ದೆಗೆ ನಾಲಾಯಕ್ ಎಂದು ಗುಡುಗಿದ್ದಾರೆ. ಸಿದ್ದಾರ್ಥ, ಡಾ.ಅಂಬೇಡ್ಕರ್ ಹೆಸರಿನಲ್ಲಿ ಲೂಟಿ ಮೇಲೆ ಲೂಟಿ ಮಾಡಿದ ‘ಬಲಿತ ದಲಿತ’ನೇ, ನಿಮ್ಮ ಮೀಸಲು ಕ್ಷೇತ್ರವನ್ನು ದುರ್ಬಲ ದಲಿತನಿಗೆ ಬಿಟ್ಟುಕೊಟ್ಟು ಸಾಮಾನ್ಯ ಕ್ಷೇತ್ರದಿಂದ ಗೆದ್ದು ಬನ್ನಿ. ನಿಮಗೆ, ನಿಮ್ಮಪ್ಪನಿಗೆ ಇನ್ನೆಷ್ಟು ವರ್ಷ ಮೀಸಲು ಕ್ಷೇತ್ರಗಳು ಬೇಕು? ಇನ್ನೆಷ್ಟು ವರ್ಷ ದಲಿತರ ಹೆಸರಿನಲ್ಲಿ ಅಧಿಕಾರ? ಅಸಲಿ ದಲಿತರಿಗೆ ಅಧಿಕಾರ ಕೊಡಿ ಎಂದಿದ್ದಾರೆ.

ನನ್ನ ಹುಡುಗರನ್ನು ರಕ್ಷಿಸಿಕೊಳ್ಳುವುದು ನನಗೆ ಗೊತ್ತು. ಓಡುವುದು ನನ್ನ ಜಾಯಮಾನವಲ್ಲ. ನಾನು ಕೆಪಿಎಸ್ಸಿ, ಸ್ಟಿಂಗ್ ವಿಷಯ ಪ್ರಸ್ತಾಪಿಸಿದ ಕೂಡಲೇ ಎಷ್ಟು ಕಡೆ ರನ್ನಿಂಗ್ ರೇಸ್ ಮಾಡಿದ್ದೀರಿ ಎಂದು ನನಗೆ ಗೊತ್ತಿದೆ. ಅಂಗಲಾಚುವವನಲ್ಲ ಈ ಕುಮಾರಸ್ವಾಮಿ. ನಿಮ್ಮ ಪೊಲೀಸ್ ಕಮಿಷನರ್ ಬಳಿ ಏನು ಹೇಳಿದ್ದೇನೆ ಎಂಬುದನ್ನು ತಿಳಿದುಕೊಳ್ಳಿ.

ನಿಮ್ಮ ಪಕ್ಷದ ಹಿರಿಯ ನಾಯಕನನ್ನು ಸ್ಟಿಂಗ್ ಮಾಡಿದ ನಟೋರಿಯಸ್ ಸ್ಟಿಂಗ್’ಪಿನ್ ನನ್ನೇ ಬಂಧಿಸಲು ಯೋಗ್ಯತೆ ಇಲ್ಲ ನಿಮಗೆ. ಅವನು ಬಂದು ನಿಮ್ಮ ಡಿಸಿಪಿ ಮುಂದೆ ಕಾಲು ಮೇಲೆ ಕಾಲು ಹಾಕಿ ಕೂರುತ್ತಾನೆ, ನಿಮ್ಮ ಇಲಾಖೆಯ ನಿವೃತ್ತ IPS ಅಧಿಕಾರಿಗೆ ಕೊಲೆ ಬೆದರಿಕೆ ಹಾಕ್ತಾನೆ, ನಿಮ್ಮ ಪೊಲೀಸ್ ಅಧಿಕಾರಿಗಳ ಸ್ಟಿಂಗ್ ಮಾಡಿ ಹಫ್ತಾ ವಸೂಲಿ ಮಾಡ್ತಾನೆ. ಅವನನ್ನು ಹಿಡಿದು ಸೆದೆಬಡಿಯುವುದು ಬಿಟ್ಟು ಪುಂಗಿ ಬಿಡ್ತಾ ಇದ್ದೀರಿ. ಸ್ಟಿಂಗ್ ಸಾಮ್ರಾಟನ ಸಿಂಡಿಕೇಟ್ ನಲ್ಲಿ ನೀವು ಒಂದು ಭಾಗ ಎಂಬುದು ನನಗೆ ಗ್ಯಾರಂಟಿ ಆಗಿದೆ ಎಂದು ಕುಮಾರಸ್ವಾಮಿ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

You cannot copy content of this page

Exit mobile version