Wednesday, December 18, 2024

ಸತ್ಯ | ನ್ಯಾಯ |ಧರ್ಮ

HSRP: ಮಹತ್ವದ ಸೂಚನೆ ನೀಡಿದ ಕರ್ನಾಟಕ ಹೈಕೋರ್ಟ್

ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಫ್ಲೈಟ್(HSRP) ಅಳವಡಿಸದ ವಾಹನ ಸವಾರರಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳದ ವಾಹನ ಸವಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ತಿಳಿಸಿದೆ.

ಸಾರಿಗೆ ಇಲಾಖೆ ಹೆಚ್‌ಎಸ್​ಆರ್​ಪಿ ನಂಬರ್ ಪ್ಲೇಟ್ ಅಳವಡಿಸಲು ಇದುವರೆಗೆ ಐದು ಬಾರಿ ಗಡುವು ವಿಸ್ತರಣೆ ಮಾಡಿದೆ.

ಈ ಬಾರಿ ಕೊನೆಯದಾಗಿ ಡಿಸೆಂಬರ್ 31ರವರೆಗೆ ಹೆಚ್‌ಎಸ್​ಆರ್​ಪಿ ನಂಬರ್ ಪ್ಲೇಟ್ ಆಳವಡಿಕೆಗೆ ಗಡುವು ಕೊಟ್ಟಿದೆ. ಗಡುವು ಮುಗಿದ ಕೂಡಲೇ ದಂಡ ವಿಧಿಸಲು ಸಾರಿಗೆ ಇಲಾಖೆ ಮುಂದಾಗಿತ್ತು. ಆದರೆ, ಇದಕ್ಕೆ ಸದ್ಯ ಹೈಕೋರ್ಟ್ ರಿಲೀಫ್ ನೀಡಿದ್ದು, ಮುಂದಿನ ಆದೇಶದ ವರೆಗೂ ವಾಹನ ಮಾಲೀಕರ ಮೇಲೆ ಕ್ರಮ ಕೈಗೊಳ್ಳುವಂತಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.

ಈ ಬಗ್ಗೆ ಕುರಿತು ಮಾಹಿತಿ ನೀಡಿರುವ ಸಾರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತ ಮಲ್ಲಿಕಾರ್ಜುನ, ಕೋರ್ಟ್ ಡಿಸೆಂಬರ್ 31 ರ ವರೆಗೆ ಮಾತ್ರ ಯಾವುದೇ ಕ್ರಮ ಕೈಗೊಳ್ಳದಂತೆ ಸೂಚನೆ ನೀಡಿದೆ. ಮುಂದಿನ ಆದೇಶದ ಬಳಿಕ ಕೋರ್ಟ್ ಯಾವ ಸೂಚನೆ ನೀಡುತ್ತದೆಯೋ ಅದನ್ನು ನಾವು ಪಾಲನೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಕಳೆದ ಒಂದೂವರೆ ವರ್ಷದಿಂದ ಎರಡು ಕೋಟಿ ವಾಹನಗಳ ಪೈಕಿ ಇಲ್ಲಿಯವರೆಗೆ 56.40 ಲಕ್ಷ ವಾಹನಗಳಿಗೆ ಮಾತ್ರ ಹೆಚ್‌ಎಸ್​ಆರ್​ಪಿ ಆಳವಡಿಕೆ ಮಾಡಲಾಗಿದೆ. ಇನ್ನೂ 1.44 ಕೋಟಿ ಹಳೆಯ ವಾಹನಗಳು ಹೆಚ್‌ಎಸ್​ಆರ್​ಪಿ ನಂಬರ್ ಪ್ಲೇಟ್ ಆಳವಡಿಸಿಕೊಳ್ಳಬೇಕಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page