Tuesday, January 28, 2025

ಸತ್ಯ | ನ್ಯಾಯ |ಧರ್ಮ

ಧಾರ್ಮಿಕ ಕಾರ್ಯಕ್ರಮದ ವೇದಿಕೆ ಕುಸಿದು 5 ಮಂದಿ ಸಾವು, 60ಕ್ಕೂ ಹೆಚ್ಚು ಜನರಿಗೆ ಗಾಯ

ಉತ್ತರ ಪ್ರದೇಶದಲ್ಲಿ (ಯುಪಿ) ಗಂಭೀರ ಅಪಘಾತ ಸಂಭವಿಸಿದೆ. ಲಡ್ಡು ಉತ್ಸವ ನಡೆಯುತ್ತಿದ್ದ ವೇದಿಕೆ ಕುಸಿದು ಬಿದ್ದಿದ್ದು, ಈ ಘಟನೆಯಲ್ಲಿ ಐದು ಜನರು ಸಾವಿಗೀಡಾಗಿದ್ದಾರೆ.

ಜೊತೆಗೆ 60ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿರುವುದಾಗಿ ವರದಿಯಾಗಿದೆ.

ಅಧಿಕಾರಿಗಳ ಪ್ರಕಾರ, ಆದಿನಾಥರ ನಿರ್ವಾಣ ಲಡ್ಡು ಉತ್ಸವವನ್ನು ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮರದ ವೇದಿಕೆ ಕುಸಿದು ಬಿದ್ದಿದೆ. ಈ ಘಟನೆಯಲ್ಲಿ ಐದು ಜನರು ಸಾವನ್ನಪ್ಪಿದ್ದಾರೆ. ಇದಲ್ಲದೆ, ಜೈನ ಶಿಷ್ಯರು ಮತ್ತು ಪೊಲೀಸ್ ಸಿಬ್ಬಂದಿ ಸೇರಿದಂತೆ 60 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಅವಶೇಷಗಳ ಅಡಿಯಲ್ಲಿ ಇನ್ನೂ ಕೆಲವು ಜನರು ಸಿಲುಕಿರುವ ಅನುಮಾನವಿದ್ದು, ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದ್ದಾರೆ.

ಇದೀಗ ಈ ಅಪಘಾತದ ಬಗ್ಗೆ ಸಿಎಂ ಯೋಗಿ ಆದಿತ್ಯನಾಥ್ ಪ್ರತಿಕ್ರಿಯಿಸಿದ್ದಾರೆ. ಘಟನಾ ಸ್ಥಳದಲ್ಲಿ ಪರಿಹಾರ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಮತ್ತು ಗಾಯಾಳುಗಳಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಅವರು ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page