ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ರೋಜ್ ಗಾರ್ ಮೇಳವನ್ನು ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಉದ್ಘಾಟಿಸಿದರು.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಮೇಳಕ್ಕೆ ಚಾಲನೆ ನೀಡಿದ ನೇರ ಪ್ರಸಾರವನ್ನು ವೀಕ್ಷಿಸಿದರು. ನಂತರ ರೋಜ್ ಗಾರ್ ಮೇಳವನ್ನುದ್ದೇಶಿಸಿ ಮಾತನಾಡಿ ಅವರು, ಯುವಜನರಿಗಾಗಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಜೊತೆಗೆ ನಾಗರಿಕ ಹಿತಾಸಕ್ತಿ ಕಾಪಾಡಲು ಸರ್ಕಾರ ನಿರಂತರ ಬದ್ಧತೆಯನ್ನು ಹೊಂದಿದೆ. ಈ ಹಿನ್ನಲೆಯಲ್ಲಿ ಎಲ್ಲ ಸಚಿವಾಲಯಗಳು ಹಾಗೂ ಇಲಾಖೆಗಳು ಮಂಜೂರಾದ ಹುದ್ದೆಗಳಿಗೆ ಅನುಸಾರವಾಗಿ ಅಸ್ತಿತ್ವದಲ್ಲಿರುವ ಖಾಲಿ ಹುದ್ದೆಗಳ ವ್ಯಾಪ್ತಿಗೆ ಅಗತ್ಯ ಕ್ರಮ ಕೈಗೊಳ್ಳುತ್ತಿವೆ ಎಂದು ತಿಳಿಸಿದರು.
ದೇಶದಲ್ಲಿ, ನಿರುದ್ಯೋಗದ ಸಂಖ್ಯೆ ಹೇರಳವಾಗಿದ್ದು, ರಾಜ್ಯ ಸರ್ಕಾರಗಳೂ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಕೆಲಸ ಮಾಡಬೇಕು ಎಂದು ಹೇಳಿದರು.
ಈ ವೇಳೆ ಶಾಸಕರಾದ ಬಸವರಾಜ ಹೊರಟ್ಟಿ, ಪ್ರದೀಪ್ ಶೆಟ್ಟರ್, ಎಸ್.ವಿ. ಸಂಕನೂರ, ನೈರುತ್ಯ ರೈಲ್ವೆ ವಲಯ ಮಹಾಪ್ರಬಂಧಕ ಸಂಜೀವ್ ಕಿಶೋರ್ ಮತ್ತಿತರರು ಉಪಸ್ಥಿತರಿದ್ದರು.