Home ಬ್ರೇಕಿಂಗ್ ಸುದ್ದಿ 5.50 ಲಕ್ಷ ರೂ. ಲಂಚಕ್ಕೆ ಬೇಡಿಕೆ, ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ

5.50 ಲಕ್ಷ ರೂ. ಲಂಚಕ್ಕೆ ಬೇಡಿಕೆ, ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ

ಮೈಸೂರು : 5.50 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ಎಚ್.ಡಿ.ಕೋಟೆ ತಾಲ್ಲೂಕಿನ ಸ.ನಂ.17/26ರ 4 ಎಕರೆ 20 ಗುಂಟೆ ಭೂಮಿಗೆ ಸಂಬಂಧಿಸಿದ ಕಂದಾಯ ಮೇಲ್ಮನವಿ ಇತ್ಯರ್ಥಪಡಿಸಲು ನ್ಯಾಯಾಲಯದ ಆದೇಶವಿತ್ತು. ಈ ಕೆಲಸ ಮಾಡಿಕೊಡಲು ಕಾವ್ಯಾರಾಣಿ 10 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ ಮೊದಲ ಕಂತಿನಲ್ಲಿ ಡಾ. ರೂಪಾ ಅವರಿಂದ 5 ಲಕ್ಷ ರೂಪಾಯಿ ಲಂಚ ಪಡೆದಿದ್ದರು. ನಂತರ ರೂಪಾ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಎರಡನೇ ಕಂತಿನಲ್ಲಿ 5.50 ಲಕ್ಷ ರೂಪಾಯಿ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು ಕಾವ್ಯಾರಾಣಿ ಅವರನ್ನು ವಶಕ್ಕೆ ಪಡೆದಿದ್ದಾರೆ.

You cannot copy content of this page

Exit mobile version