Home ರಾಜ್ಯ ಹಾವೇರಿ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕೆ ನನ್ನ ಸಹಮತವಿಲ್ಲ: ಬಸವರಾಜ ಹೊರಟ್ಟಿ

ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕೆ ನನ್ನ ಸಹಮತವಿಲ್ಲ: ಬಸವರಾಜ ಹೊರಟ್ಟಿ

0

ಹಾವೇರಿ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದರೆ ಯಾವುದೇ ಸಮಸ್ಯೆಗಳು ಬಗೆಹರಿಯುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಪ್ರತ್ಯೇಕ ರಾಜ್ಯದ ರಚನೆಗೆ ತಮ್ಮ ಸಹಮತವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಏಕೀಕರಣಕ್ಕಾಗಿ ಅನೇಕರು ಹೋರಾಡಿದ್ದರ ಫಲವಾಗಿ ಅಖಂಡ ಕರ್ನಾಟಕ ಉದಯವಾಗಿದೆ. ಅಖಂಡ ಕರ್ನಾಟಕದಲ್ಲಿಯೇ ಇದ್ದು, ಉತ್ತರ ಕರ್ನಾಟಕಕ್ಕೆ ಆಗಿರುವ ಅನ್ಯಾಯಗಳನ್ನು ಸರಿಪಡಿಸಲು ಹೋರಾಟ ಮಾಡಬೇಕು. ಅದನ್ನು ಬಿಟ್ಟು ಪ್ರತ್ಯೇಕ ರಾಜ್ಯವನ್ನು ಮಾಡುವುದರಲ್ಲಿ ಯಾವುದೇ ಪ್ರಯೋಜನವಿಲ್ಲ ಎಂದು ಹೇಳಿದರು.

ಡಿಸೆಂಬರ್ 8 ರಿಂದ 19 ರವರೆಗೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ಬೆಳಗಾವಿ ಅಧಿವೇಶನ ಎಂದರೆ ಕೇವಲ ಪ್ರತಿಭಟನೆಗಳಿಗೆ ಮಾತ್ರ ಸೀಮಿತ ಎಂಬ ಭಾವನೆ ಕೆಲವರಲ್ಲಿದೆ. ಆ ಭಾವನೆಯನ್ನು ದೂರ ಮಾಡಲು ತಾವು ಬುಧವಾರ ಬೆಳಗಾವಿಗೆ ತೆರಳುವುದಾಗಿ ತಿಳಿಸಿದರು.

ಶಿಕ್ಷಣ, ಆರೋಗ್ಯ, ಕಬ್ಬು ಬೆಳೆಗಾರರು ಹೀಗೆ ಬೇರೆ ಬೇರೆ ಇಲಾಖೆಗಳ ಸಮಸ್ಯೆಗಳ ಕುರಿತು ಪ್ರತಿಭಟನೆಗಳು ನಡೆಯುತ್ತವೆ. ಸದನದಲ್ಲಿ ಗಲಾಟೆ ಆಗದಂತೆ ಆಡಳಿತಾರೂಢ ಪಕ್ಷದ ಮತ್ತು ವಿರೋಧ ಪಕ್ಷಗಳ ಸದಸ್ಯರನ್ನು ಕರೆದು ಸಭೆ ನಡೆಸಿ, ಸುಸೂತ್ರವಾಗಿ ಅಧಿವೇಶನ ನಡೆಸಲು ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೊರಟ್ಟಿ ತಿಳಿಸಿದರು.

You cannot copy content of this page

Exit mobile version