ಬೆಳಗಾವಿ: ಮುಸಲ್ಮಾನರಿಗೆ, ಹಿಂದುಳಿದವರಿಗೆ ಮಾತ್ರವಲ್ಲದೆ , ಎಲ್ಲಾ ಧರ್ಮದ, ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು , ಸಾಮಾಜಿಕ ಆರ್ಥಿಕ ಶಕ್ತಿ ತುಂಬಬೇಕು. ಇದೇ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
ಅವರು ಇಂದು ಬೆಳಗಾವಿ ಸಾಂಭ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು.
ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಮೂಲ ಪ್ರತಿ ಮುಖ್ಯಮಂತ್ರಿಗಳ ಬಳಿಯಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿ ಆಶೋಕ್ ಅವರು ಯಾವತ್ತಾದರೂ ಸತ್ಯವನ್ನು ಹೇಳಿದ್ದಾರೆಯೇ? ಅವರು ಸುಳ್ಳೇ ಹೇಳುವುದು. ಮೂಲ ಪ್ರತಿ ನನ್ನ ಬಳಿಯಿರಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ರಾಹುಲ್ ಗಾಂಧಿಯವರಿಗೆ ನಾವು ಪತ್ರ ಬರೆದಿಲ್ಲ ಆದರೆ ಅವರೊಂದಿಗೆ ಚರ್ಚೆ ಮಾಡಿ ಸಚಿವ ಸಂಪುಟ ಸಭೆಯಲ್ಲಿ ಸಮೀಕ್ಷೆಯ ವರದಿಯನ್ನು ಮಂಡಿಸಿದ್ದೇವೆ ಎಂದರು.
ಜಾತಿಗಣತಿ: ಸಚಿವರ ಅಭಿಪ್ರಾಯದ ನಂತರ ಅಂತಿಮ ತೀರ್ಮಾನ
ಕಾಂಗ್ರೆಸ್ ಶಾಸಕರೇ ಈ ಬಗ್ಗೆ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಸಚಿವ ಸಂಪುಟ ಸಭೆಯಲ್ಲಿ ಯಾರೂ ಈ ಬಗ್ಗೆ ವಿರೋಧ ವ್ಯಕ್ತಪಡಿಸಿ ಯಾರೂ ಜೋರಾಗಿ ಮಾತನಾಡಿಲ್ಲ. ಸಮೀಕ್ಷೆಯನ್ನು ಓದಿಕೊಂಡು ಅಭಿಪ್ರಾಯಗಳನ್ನು ತಿಳಿಸುವಂತೆ ಸೂಚಿಸಲಾಗಿದ್ದು ಸಚಿವರು ಅಭಿಪ್ರಾಯ ತಿಳಿಸಿದ ನಂತರ ಪುನ: ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದರು.
ಯಾವ ಜಾತಿಗೂ ಅನ್ಯಾಯವಾಗಬಾರದು
ಯಾವ ಜಾತಿಗೂ ಅನ್ಯಾಯವಾಗಬಾರದು ಎನ್ನುವುದು ಸರ್ಕಾರದ ಉದ್ದೇಶ. ಇದು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ. ಸಂವಿಧಾನ ಜಾರಿಯಾಗಿ 75 ವರ್ಷಗಳಾಗಿದ್ದರೂ ಬಡವ ಬಡವನಾಗಿಯೇ ಉಳಿಯಬೇಕೆ? ಸಮಾನತೆ ಬೇಡವೇ, ಜಾತಿಗೆ ಅಂಟಿಕೊಂಡೇ ಇರಬೇಕೆ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.
[1:26 pm, 20/4/2025] +91 94481 42741: ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ: ಸಿ.ಎಂ ಸಿದ್ದರಾಮಯ್ಯ
ಈಗಾಗಲೇ ಗುತ್ತಿಗೆ ನೌಕರರನ್ನು ಕನಿಷ್ಠ ವೇತನ ಅಡಿಯಲ್ಲಿ ತರಲಾಗಿದೆ: ಸಿಎಂ
ಬೆಳಗಾವಿ ಏ 20:
ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ಸಿ.ಎಂ ಸಿದ್ದರಾಮಯ್ಯ ಅವರು ನುಡಿದರು.
ಸ್ಮಾರ್ಟ್ ಸಿಟಿ ಅನುದಾನದ ಅಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಬೆಳಗಾವಿಯ ಟಿಳಕವಾಡಿಯಲ್ಲಿ ಆಧುನಿಕ ಸೌಲಭ್ಯಗಳುಳ್ಳ ಬಹುಮಹಡಿ ಕಲಾ ಮಂದಿರವನ್ನು ಲೋಕಾರ್ಪಣೆಗೊಳಿಸಿದ ಬಳಿಕ ಮಾತನಾಡಿದರು.
ಈಗಾಗಲೇ ಗುತ್ತಿಗೆ ನೌಕರರನ್ನು ಕನಿಷ್ಠ ವೇತನ ಅಡಿಯಲ್ಲಿ ತರಲಾಗಿದೆ. ಇದನ್ನು ಮಾಡಿದ್ದು ನಮ್ಮ ಸರ್ಕಾರವೇ, ಈಗ ಕಾಯಂ ಮಾಡುವುದೂ ಕೂಡ ನಮ್ಮ ಸರ್ಕಾರವೇ ಎಂದು ತಿಳಿಸಿದರು.
ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ 150 ಕಾರ್ಯಕ್ರಮಗಳನ್ನು ಕೈಗೆತ್ತಿಕೊಂಡು ಇದರಲ್ಲಿ 102 ಪೂರ್ಣಗೊಂಡಿವೆ. ಉಳಿದವು ಸದ್ಯದಲ್ಲೇ ಪೂರ್ಣಗೊಳ್ಳಲಿವೆ ಎಂದರು.
ಸ್ಮಾರ್ಟ್ ಸಿಟಿ ಯೋಜನೆಯಲ್ಲಿ 6928 ಕೋಟಿ ಮೊತ್ತದ ಕೆಲಸಗಳು ನಡೆಯುತ್ತಿವೆ ಎಂದರು.
ಬೆಳಗಾವಿಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ನಿರಂತರವಾಗಿ ಯೋಜನೆ, ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ತರುತ್ತಿದೆ ಎಂದರು.