ದೆಹಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ.
ದೆಹಲಿ ಅಭಿವೃದ್ಧಿ ಪ್ರಾಧಿಕಾರದ ಆಶ್ರಯದಲ್ಲಿ ನಿರ್ಮಿಸಲಾದ ಅನೇಕ ವಸತಿ ಸಂಕೀರ್ಣಗಳನ್ನು ಅವರು ಇಂದು ಉದ್ಘಾಸಿದರು. ನಾಲ್ಕು ಕೋಟಿ ಜನರಿಗೆ ಮನೆ ಕಟ್ಟಿಸಿದ್ದೇನೆ ಎಂದ ಅವರು, ತನಗಾಗಿ ಬಂಗಲೆ ಕಟ್ಟಿಸಿಕೊಂಡಿಲ್ಲ ಎಂದರು. ಈ ಸಂದರ್ಭದಲ್ಲಿ ಆಡಳಿತ ಪಕ್ಷವನ್ನು ವಿಪತ್ತು ಎಂದು ಬಣ್ಣಿಸಿದ ಮೋದಿ, ಆಪ್ ಸರ್ಕಾರ ಜನರಿಗೆ ಸೌಲಭ್ಯಗಳನ್ನು ಒದಗಿಸುವಲ್ಲಿ ವಿಫಲವಾಗಿದೆ ಎಂದು ದೂರಿದರು.
‘‘ಮೋದಿ ಅವರು ಮನೆ ಕಟ್ಟಿಕೊಂಡಿಲ್ಲ ಎಂಬುದು ಇಡೀ ದೇಶಕ್ಕೆ ಗೊತ್ತಿದೆ. ಆದರೆ, ಕಳೆದ ಹತ್ತು ವರ್ಷಗಳಲ್ಲಿ ನಾವು ಬಡವರಿಗೆ 4 ಕೋಟಿ ಮನೆಗಳನ್ನು ನಿರ್ಮಿಸಿದ್ದೇವೆ ಮತ್ತು ಅವರ ಕನಸುಗಳನ್ನು ನನಸಾಗಿದ್ದೇವೆ” ಎಂದು ಪ್ರಧಾನಿ ಮೋದಿ ಹೇಳಿದರು. ಈ ಸಂದರ್ಭದಲ್ಲಿ ಎಎಪಿ ವಿರುದ್ಧ ವಾಗ್ದಾಳಿ ನಡೆಸಿದ ಮೋದಿ ಅವರು ಮದ್ಯ, ಶಾಲೆ ಮತ್ತು ಮಾಲಿನ್ಯ ಹಗರಣಗಳನ್ನು ಮಾಡಿದ್ದಾರೆ ಎಂದು ಆರೋಪಿಸಿದರು. ಬಹಿರಂಗವಾಗಿಯೇ ಭ್ರಷ್ಟಾಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು. ಕಳೆದ ಹತ್ತು ವರ್ಷಗಳಿಂದ ದೆಹಲಿಯನ್ನು ವಿಪತ್ತು (AAPda) ಆವರಿಸಿದೆ, ಜನರು ಇದರ ವಿರುದ್ಧ ಹೋರಾಡಲು ಸಿದ್ಧರಾಗಿದ್ದಾರೆ ಎಂದು ಹೇಳಿದರು.