Home ರಾಜ್ಯ ಬೆಳಗಾವಿ ಹಿಂದಿನ ಸಮ್ಮಿಶ್ರ ಸರ್ಕಾರವನ್ನು ಬೀಳಿಸಿದ್ದು ನಾನು, ಸಿದ್ದರಾಮಯ್ಯ ಅಲ್ಲ: ರಮೇಶ್‌ ಜಾರಕಿಹೊಳಿ

ಹಿಂದಿನ ಸಮ್ಮಿಶ್ರ ಸರ್ಕಾರವನ್ನು ಬೀಳಿಸಿದ್ದು ನಾನು, ಸಿದ್ದರಾಮಯ್ಯ ಅಲ್ಲ: ರಮೇಶ್‌ ಜಾರಕಿಹೊಳಿ

0

ಬೆಳಗಾವಿ: ಈ ಹಿಂದೆ ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಪತನಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮುಖ್ಯ ಕಾರಣ. ಸಿದ್ದರಾಮಯ್ಯ ಇದಕ್ಕೆ ಕಾರಣ ಅಲ್ಲ. ಸರ್ಕಾರ ಕೆಡವಲು ನಾನೇ ಮುಂದಾಳತ್ವ ವಹಿಸಿದ್ದೆ. ಬೆಳಗಾವಿ ರಾಜಕಾರಣದಲ್ಲಿ ಡಿ.ಕೆ.ಶಿವಕುಮಾರ್‌ ಹಸ್ತಕ್ಷೇಪ ಮಾಡಿದ್ದಕ್ಕೆ ಸರ್ಕಾರ ಕೆಡವಿದೆ.

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಹೇಳಿದಂತೆ ಸಿದ್ದರಾಮಯ್ಯ ಕಾರಣ ಅಲ್ಲ ಎಂದು ಗೋಕಾಕ ಶಾಸಕ ರಮೇಶ್‌ ಜಾರಕಿಹೊಳಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಾನು ಬಿಜೆಪಿ ಶಾಸಕ. ಕಾಂಗ್ರೆಸ್‌ನ ಹೊಲಸು ರಾಜಕಾರಣದ ಬಗ್ಗೆ ಬಿಜೆಪಿ ಮಾತನಾಡಬಾರದು. ನಾಯಕತ್ವ ಬದಲಾವಣೆ ಸಂಬಂಧ ಕಾಂಗ್ರೆಸ್‌ನ ಆಂತರಿಕ ವಿಚಾರದಲ್ಲಿ ಬಿಜೆಪಿ ತಟಸ್ಥ ಇರಬೇಕು ಎಂದರು.

ಪೂರ್ಣ ಬಹುಮತದ ಸರ್ಕಾರ ತರಲು ನಾವೆಲ್ಲರೂ ಗಟ್ಟಿಯಾಗಿ ಕೆಲಸ ಮಾಡಬೇಕು.ಹೈಕಮಾಂಡ್ ನಿರ್ಣಯಕ್ಕೆ ನಾವು ಬದ್ಧರಿದ್ದೇವೆ ಎಂದರು.

You cannot copy content of this page

Exit mobile version