ಬೆಂಗಳೂರು: ತನಗೆ ದಿನದಿಂದ ದಿನಕ್ಕೆ ಜನ ಬೆಂಬಲ ಹೆಚ್ಚಾಗುತ್ತಿದ್ದು, ಮುಂದಿನ ಸಲ ಬಿಜೆಪಿ ಗೆದ್ದರೆ ನಾನೇ ಮುಖ್ಯಮಂತ್ರಿಯಾಗುತ್ತೇನೆ ಎಂದು ಬಸನಗೌಡ ಪಾಟೀಲ ಯತ್ನಾಳ್ ಹೇಳಿದ್ದಾರೆ.
ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಿರುದ್ಧ ತೊಡೆ ತಟ್ಟಿರುವ ಯತ್ನಾಳ್ ನಾನು ಮುಂದಿನ ಸಲ ಮುಖ್ಯಮಂತ್ರಿಯಾಗಿ ರಾಜ್ಯದಲ್ಲಿ ಹಿಂದೂಪರ ಸರ್ಕಾರ ತರುತ್ತೇನೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಇನ್ನು ಹೆಚ್ಚು ದಿನ ಉಳಿಯುವುದಿಲ್ಲ ಎಂದು ಹೇಳಿದ್ದಾರೆ. ಸಿದ್ಧರಾಮಯ್ಯನವರೇ ರಾಯಣ್ಣನಿಗೆ ಅವನ ಸುತ್ತಲಿದ್ದವರೇ ಮೋಸ ಮಾಡಿದಂತೆ ನನಗೂ ನನ್ನವರೇ ಮೋಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಹೀಗಾಗಿ ಅವರ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ ಎಂದು ಅವರು ಹೇಳಿದರು.
ಕೆಲವರು ಸಾವಿರ ಕೋಟಿ ತಯಾರಾಗಿ ಇಟ್ಟುಕೊಂಡು ಸಿಎಮ್ ಆಗಲು ಕಾಯುತ್ತಿದ್ದಾರೆ. ಅವರಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ಪಕ್ಷಗಳವರು ಇದ್ದಾರೆ ಎಂದು ಅವರು ಹೇಳಿದ್ದಾರೆ.
ಬಿಜೆಪಿಯಲ್ಲಿ ಭಿನ್ನಮತ ದೊಡ್ಡ ಮಟ್ಟದಲ್ಲೇ ಇದೆ, ಆದರೆ ವರಿಷ್ಟರು ಈ ಕುರಿತು ಮಾತನಾಡದಿರಲು ತಿಳಿಸಿದ್ದಾರೆ. ಹೀಗಾಗಿ ನಾನು ಆ ವಿಷಯದ ಕುರಿತು ಮಾತನಾಡುವುದಿಲ್ಲ ಎಂದು ಅವರು ಹೇಳಿದರು.