Sunday, August 24, 2025

ಸತ್ಯ | ನ್ಯಾಯ |ಧರ್ಮ

ಅಧಿಕಾರಿಗಳಿಗೆ ಚುರುಕು ಮುಟ್ಟಿಸುವ ಕೆಲಸ ಮಾಡುತ್ತೇನೆ – ಸಂಸದ ಡಾ.ಸುಧಾಕರ್

ಬೆಂಗಳೂರು: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ.ಕೆ. ಸುಧಾಕರ್ ಅವರು ತಮ್ಮ ಕಛೇರಿಯ ಉದ್ಘಾಟನಾ ಕಾರ್ಯಕ್ರಮ ಮುಗಿದ ನಂತರ ಕಾರ್ಯಕರ್ತರೊಟ್ಟಿಗೆ ಮಾತನಾಡಿದರು.

ಈ ಸಂಧರ್ಭದಲ್ಲಿ ಮಾತನಾಡುತ್ತಾ “ಕಳೆದ ಒಂದು ವರ್ಷದಿಂದ ಸರ್ಕಾರಿ ಕೆಲಸಗಳು ಮಂದಗತಿಯಲ್ಲಿ ಸಾಗುತ್ತಿವೆ, ಕೆಲವು ಸ್ಥಗಿತಗೊಂಡಿವೆ. ಆಡಳಿತ ಅಧಿಕಾರಿಗಳಿಗೆ ಚುರುಕು ಮುಟ್ಟಿಸುವಂತಹ ಕೆಲಸ ಮಾಡುತ್ತೇನೆ.” ಎಂದು ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿದ್ದಂತಹ ಕಾರ್ಯಕರ್ತರನ್ನ ಉದ್ದೇಶಿಸಿ ಮಾತನಾಡಿದರು.

ಹಾಗೆಯೇ ಮುಂದುವರೆದು “ಪ್ರತೀ ವಾರ ಎಲ್ಲಾ ಕ್ಷೇತ್ರಗಳಿಗೆ ಭೇಟಿ ನೀಡಿ ಜನಸಾಮಾನ್ಯರೊಂದಿಗೆ ನೇರ ಸಂಪರ್ಕ ಪಡೆದು ಅವರ ಸಮಸ್ಯೆಗಳನ್ನ ಬಗೆಹರಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ” ಎಂದು ತಿಳಿಸಿದರು.

ಈ ಕುರಿತಂತೆ ತಮ್ಮ X ಖಾತೆಯಲ್ಲಿ ವೀಡಿಯೋ ತುಣುಕನ್ನು ಹಂಚಿಕೊಂಡಿದ್ದು, ಜನಸಾಮಾನ್ಯರನ್ನು ಅನಗತ್ಯವಾಗಿ ಸರ್ಕಾರಿ ಕಛೇರಿಗಳಿಗೆ ಅಲೆದಾಡಿಸುವ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವ ಕೆಲಸ ಮಾಡುತ್ತೇನೆ ಎಂದಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page