ಕಲಬುರಗಿ: ರಾಜ್ಯದಲ್ಲಿರುವುದು ಲಂಚ ಹಾಗೂ ಮಂಚದ ಸರ್ಕಾರ ಎಂದು ಬಿಜೆಪಿ ಟೀಕಿಸುವ ಭರದಲ್ಲಿ ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಈ ಸರ್ಕಾರದಲ್ಲಿ ಹಣ ಕೊಡದೆ ಯಾವುದೇ ಕೆಲಸ ಆಗಲ್ಲ. ಯುವಕರು ಸರ್ಕಾರಿ ನೌಕರಿ ಪಡೆಯಬೇಕು ಅಂದ್ರೆ ಲಂಚ ಕೊಡಬೇಕು. ಯುವತಿಯರು ನೌಕರಿ ಪಡೆಯಬೇಕು ಅಂದ್ರೆ ಮಂಚ ಹತ್ತಬೇಕಾಗಿದೆ, ಪರೋಕ್ಷ ಉದಾಹರಣೆಯೊಂದಿಗೆ ಹೇಳಬೇಕಾದರೆ 40% ಪರ್ಸೆಂಟ್ ಗಾಗಿ ಓರ್ವ ಸಚಿವ ರಾಜೀನಾಮೆ ನೀಡಿದ್ರೆ, ನೌಕರಿ ಕೇಳಿದ ಯುವತಿಗೆ ಮಂಚಕ್ಕೆ ಕರೆದು ಓರ್ವ ಸಚಿವ ರಾಜೀನಾಮೆ ನೀಡಿದ್ದಾನೆ ಎಂದು ಹೇಳಿಕೆಯಲ್ಲಿ ಈಶ್ವರಪ್ಪ ಹಾಗೂ ರಮೇಶ್ ಜಾರಕಿ ಹೊಳಿಯವರನ್ನು ಸೂಚಿಸಿದ್ದಾರೆ.
ರಾಜ್ಯದಲ್ಲಿ 40% ಸರ್ಕಾರ ಚಾಲ್ತಿಯಲ್ಲಿದೆ. KPTCL ನೇಮಕಾತಿ ಪರೀಕ್ಷೆಯಲ್ಲಿ ಸುಮಾರು 300 ಕೋಟಿಗೂ ಹೆಚ್ಚು ಭ್ರಷ್ಟಾಚಾರ ನಡೆದಿದೆ, PSI ನೇಮಕಾತಿಯಲ್ಲೂ ಅಕ್ರಮ ನಡೆದಿದೆ, ಹಾಗಾಗಿ ಸರ್ಕಾರ ಯಾವುದೇ ಪರೀಕ್ಷೆ ನಡೆಸಿದರು ಅಕ್ರಮಗಳು ಹೊರಬರುತ್ತಿವೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.