Home ಬ್ರೇಕಿಂಗ್ ಸುದ್ದಿ ಕೇರಳದಲ್ಲಿ ಬಿಜೆಪಿ ಸರ್ಕಾರ ಬಂದರೆ ಶಬರಿಮಲೆ ಚಿನ್ನ ಕಳವು ತನಿಖೆ ಮಾಡ್ತೀವಿ – ಪಿಎಂ ಮೋದಿ

ಕೇರಳದಲ್ಲಿ ಬಿಜೆಪಿ ಸರ್ಕಾರ ಬಂದರೆ ಶಬರಿಮಲೆ ಚಿನ್ನ ಕಳವು ತನಿಖೆ ಮಾಡ್ತೀವಿ – ಪಿಎಂ ಮೋದಿ

ತಿರುವನಂತಪುರಂ: ಕೇರಳದಲ್ಲಿ ಬಿಜೆಪಿ ಸರ್ಕಾರ ರಚನೆಯಾದರೆ ಶಬರಿಮಲೆ ದೇವಸ್ಥಾನದ ಚಿನ್ನ ಕಳವು ಪ್ರಕರಣದ ತನಿಖೆ ನಡೆಸಲಾಗುವುದು. ಇದು ಮೋದಿಯ ಗ್ಯಾರಂಟಿ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಕೇರಳದಲ್ಲಿ ಚುನಾವಣಾ ದಿನಾಂಕ ಪ್ರಕಟವಾಗುವ ಮೊದಲೇ  ಮೋದಿ ಪಕ್ಷದ ಪರ ಪ್ರಚಾರಕ್ಕೆ ಇಳಿದಿದ್ದು, ಇಂದು ತಿರುವನಂತಪುರದಲ್ಲಿ ಬಿಜೆಪಿಯ ಕಾರ್ಯಕ್ರಮದಲ್ಲಿ ಭಾಗಿಯಾಗಿ ಎಲ್‌ಡಿಎಫ್‌, ಯುಡಿಎಫ್‌ ಮೈತ್ರಿ ವಿರುದ್ಧ ಕಿಡಿಕಾರಿದ್ದಾರೆ. ತಿರುವನಂತಪುರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರ ಹಿಡಿದಿದೆ. ಇದು ರಾಜ್ಯದ ಜನರು ಬದಲಾವಣೆ ಬಯಸುತ್ತಿದ್ದಾರೆ ಎನ್ನುವುದಕ್ಕೆ ಸ್ಪಷ್ಟವಾದ ಉದಾಹರಣೆ. ಕೇರಳದಲ್ಲಿ ಬದಲಾವಣೆ ಅನಿವಾರ್ಯ. ಎಡಪಂಥೀಯ ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ ಮತ್ತು ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಕೇರಳವನ್ನು ಭ್ರಷ್ಟಾಚಾರ ಮತ್ತು ತುಷ್ಟೀಕರಣದ ರಾಜಕೀಯದ ತಳ್ಳಿವೆ ಎಂದು ಆರೋಪಿಸಿದ್ದಾರೆ.

ತಿರುವನಂತಪುರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರ ಹಿಡಿದಿದೆ. ಇದು ರಾಜ್ಯದ ಜನರು ಬದಲಾವಣೆ ಬಯಸುತ್ತಿದ್ದಾರೆ ಎನ್ನುವುದಕ್ಕೆ ಸ್ಪಷ್ಟವಾದ ಉದಾಹರಣೆ. ಕೇರಳದಲ್ಲಿ ಬದಲಾವಣೆ ಅನಿವಾರ್ಯ. ಎಡಪಂಥೀಯ ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ ಮತ್ತು ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಕೇರಳವನ್ನು ಭ್ರಷ್ಟಾಚಾರ ಮತ್ತು ತುಷ್ಟೀಕರಣದ ರಾಜಕೀಯದ ತಳ್ಳಿವೆ ಎಂದು ಆರೋಪಿಸಿದ್ದಾರೆ.

ಎಲ್‌ಡಿಎಫ್‌, ಯುಡಿಎಫ್‌ ಧ್ವಜಗಳು ಮತ್ತು ಚಿಹ್ನೆಗಳು ಭಿನ್ನವಾಗಿದ್ದರೂ ಅವರ ರಾಜಕೀಯ ಮತ್ತು ಕಾರ್ಯಸೂಚಿ ಬಹುತೇಕ ಒಂದೇ ಆಗಿವೆ. ದಶಕಗಳಿಂದ ಎಲ್‌ಡಿಎಫ್ ಮತ್ತು ಯುಡಿಎಫ್ ತಿರುವನಂತಪುರವನ್ನು ನಿರ್ಲಕ್ಷಿಸಿ ನಗರವನ್ನು ಮೂಲಭೂತ ಸೌಕರ್ಯಗಳಿಂದ ವಂಚಿತಗೊಳಿಸಿತ್ತು. ಎಡಪಂಥೀಯರು ಮತ್ತು ಕಾಂಗ್ರೆಸ್ ಜನರ ಅಗತ್ಯಗಳನ್ನು ಪೂರೈಸುವಲ್ಲಿ ನಿರಂತರವಾಗಿ ವಿಫಲವಾಗಿವೆ. ಆದರೆ ನಮ್ಮ ತಂಡ ಅಭಿವೃದ್ಧಿ ಹೊಂದಿದ ತಿರುವನಂತಪುರಂ ಕಡೆಗೆ ಕೆಲಸ ಮಾಡಲು ಆರಂಭಿಸಿದೆ ಎಂದು ಹೇಳಿದ್ದಾರೆ. ತಿರುವನಂತಪುರಂ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಯ ಗೆಲುವು ಐತಿಹಾಸಿಕ, ಈ ಗೆಲುವು ಉತ್ತಮ ಆಡಳಿತದ ಗೆಲುವು ಮತ್ತು ಅಭಿವೃದ್ಧಿ ಹೊಂದಿದ ಕೇರಳದ ಸಂಕಲ್ಪದ ಗೆಲುವು, ಕೇರಳವನ್ನು ಭ್ರಷ್ಟಾಚಾರದಿಂದ ಮುಕ್ತಗೊಳಿಸುವ ಬದ್ಧತೆಯ ವಿಜಯ ಎಂದು ಬಣ್ಣಿಸಿದರು. ಪ್ರಧಾನಿ ಮೋದಿ ಅವರು ಕೇರಳದಲ್ಲಿ ಬಿಜೆಪಿಯ ಆರಂಭವನ್ನು ಗುಜರಾತ್‌ನಲ್ಲಿ ಪಕ್ಷದ ಆರಂಭಿಕ ಪ್ರಯಾಣದೊಂದಿಗೆ ಹೋಲಿಕೆ ಮಾಡಿದ್ದಾರೆ.

1987 ಕ್ಕಿಂತ ಮೊದಲು ಬಿಜೆಪಿ ಗುಜರಾತ್‌ನಲ್ಲಿ ಒಂದು ಸಣ್ಣ ಪಕ್ಷವಾಗಿತ್ತು ಮತ್ತು ಅದೇ ವರ್ಷ ಅದು ಮೊದಲ ಬಾರಿಗೆ ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯನ್ನು ಗೆದ್ದಿತು. ಗುಜರಾತ್‌ನಲ್ಲಿ ಒಂದು ನಗರದಿಂದ ಆರಂಭವಾದಂತೆ ಕೇರಳದಲ್ಲಿ ಬಿಜೆಪಿಯ ಹೊಸ ರಾಜಕೀಯ ಪ್ರಯಾಣವೂ ಒಂದು ನಗರದಿಂದ ಪ್ರಾರಂಭವಾಗುತ್ತಿದೆ ಎಂದು  ತಿಳಿಸಿದ್ದಾರೆ.

ತಿರುವನಂತಪುರಂ ಈಗ ಇಡೀ ದೇಶಕ್ಕೆ ಮಾದರಿ ನಗರವಾಗಲಿದೆ, ಈ ನಗರದ ಜನರಿಗೆ ನಾನು ಹೇಳುತ್ತೇನೆ ನಂಬಿಕೆ ಇಡಿ. ಇದನ್ನು ಭಾರತದ ಅತ್ಯುತ್ತಮ ನಗರಗಳಲ್ಲಿ ಒಂದನ್ನಾಗಿ ಮಾಡಲು ನಾನು ನನ್ನ ಸಂಪೂರ್ಣ ಬೆಂಬಲವನ್ನು ನೀಡುತ್ತೇನೆ ಎಂದಿದ್ದಾರೆ.

ಭಾಷಣಕ್ಕೂ ಮೊದಲು ಕೇರಳ, ತಮಿಳುನಾಡು, ಕರ್ನಾಟಕ, ತೆಲಂಗಾಣ ಮತ್ತು ಆಂಧ್ರಪ್ರದೇಶ ನಡುವಿನ ಪ್ರಾದೇಶಿಕ ರೈಲು ಸಂಪರ್ಕವನ್ನು ಹೆಚ್ಚಿಸಲು ಮೂರು ಅಮೃತ್ ಭಾರತ್ ಎಕ್ಸ್‌ಪ್ರೆಸ್ ರೈಲುಗಳು ಸೇರಿದಂತೆ ನಾಲ್ಕು ಹೊಸ ರೈಲು ಸೇವೆಗಳಿಗೆ ಪ್ರಧಾನಿ ಮೋದಿ ಹಸಿರು ನಿಶಾನೆ ತೋರಿದ್ದಾರೆ.

You cannot copy content of this page

Exit mobile version