ಮೋದಿ ಸಂವಿಧಾನ ಓದಿದ್ದರೆ ದ್ವೇಷ ಹರಡುವ ಕೆಲಸ ಮಾಡುತ್ತಿರಲಿಲ್ಲ: ರಾಹುಲ್ ಗಾಂಧಿ

ಭಾರತದ ಪ್ರಧಾನಿ ನರೇಂದ್ರ ಮೋದಿ ಕೋಟ್ಯಾಧಿಪತಿಗಳ ಅನುಕೂಲಕ್ಕಾಗಿ ಮಾತ್ರ ಕೆಲಸ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಜಾರ್ಖಂಡ್ ವಿಧಾನಸಭಾ ಚುನಾವಣಾ ಪ್ರಚಾರದ ಅಂಗವಾಗಿ ರಾಹುಲ್ ಗಾಂಧಿ ಮಾತನಾಡಿದರು.

ವಿರೋಧ ಪಕ್ಷದವರು ಸಂವಿಧಾನ ರಕ್ಷಣೆಗೆ ಹೋರಾಟ ನಡೆಸುತ್ತಿದ್ದರೆ ಬಿಜೆಪಿಯವರು ಅದನ್ನು ಕಸದ ಬುಟ್ಟಿಗೆ ಹಾಕಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.

ರಾಹುಲ್ ಗಾಂಧಿ ಕೆಂಪು ಪುಸ್ತಕ ತೋರಿಸುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಹೇಳುತ್ತಾರೆ. ಅದರ ಬಣ್ಣ ಮುಖ್ಯವಲ್ಲ. ವಿಷಯ ಮುಖ್ಯ ಎಂದರು. ಅವರು ಅದನ್ನು ಓದಿದ್ದರೆ ದ್ವೇಷ ಹರಡಿ ಸಮಾಜವನ್ನು ಒಡೆಯುವ ಪ್ರಯತ್ನ ಮಾಡುತ್ತಿರಲಿಲ್ಲ. ಇದು ಪ್ರತಿಪಕ್ಷಗಳ ಮೈತ್ರಿಕೂಟ ಹಾಗೂ ಬಿಜೆಪಿ-ಬಿಆರ್‌ಎಸ್ ನಡುವೆ ನಡೆಯುತ್ತಿರುವ ಹೋರಾಟವಾಗಿದೆ ಎಂದರು.

ನಾವು ಸಂವಿಧಾನವನ್ನು ರಕ್ಷಿಸಲು ಹೋರಾಟ ಮಾಡುತ್ತಿದ್ದರೆ, ಅವರು ಜಾತಿ ಮತ್ತು ಧರ್ಮದ ಆಧಾರದ ಮೇಲೆ ಸಮಾಜವನ್ನು ಒಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಟೀಕಿಸಿದರು.

Related Articles

ಇತ್ತೀಚಿನ ಸುದ್ದಿಗಳು