Home ದೇಶ ಅಗತ್ಯ ಬಿದ್ದರೆ ಜನರ ಮನೆಗಳಲ್ಲಿ ಉಳಿದುಕೊಳ್ಳುತ್ತೇನೆ: ಅತಿಶಿ

ಅಗತ್ಯ ಬಿದ್ದರೆ ಜನರ ಮನೆಗಳಲ್ಲಿ ಉಳಿದುಕೊಳ್ಳುತ್ತೇನೆ: ಅತಿಶಿ

0

ದೆಹಲಿ: ಇತ್ತೀಚೆಗಷ್ಟೇ ಕೇಂದ್ರ ಸರ್ಕಾರ ಮುಖ್ಯಮಂತ್ರಿಯಾಗಿ ತಮಗೆ ಮಂಜೂರಾಗಿದ್ದ ನಿವಾಸವನ್ನು ರದ್ದು ಮಾಡಿದೆ ಎಂದು ದೆಹಲಿ ಸಿಎಂ ಅತಿಶಿ ಟೀಕಿಸಿದ್ದಾರೆ. ಮೂರು ತಿಂಗಳ ಅವಧಿಯಲ್ಲಿ ಇದು ಎರಡನೇ ಬಾರಿಗೆ ಸಂಭವಿಸಿದೆ.

ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿವಾಸ ರದ್ದುಪಡಿಸಿರುವ ಕುರಿತು ಕೇಂದ್ರ ಸರ್ಕಾರದಿಂದ ಸೋಮವಾರವೂ ನೋಟಿಸ್‌ ಬಂದಿದೆ. ಮನೆ ಖಾಲಿ ಮಾಡಬೇಕಾಗಿದೆ ಎಂದು ವಿವರಿಸಿದರು.

ಬಿಜೆಪಿ ತನ್ನ ಕುಟುಂಬ ಸದಸ್ಯರನ್ನು ಗುರಿಯಾಗಿಸುತ್ತಿದೆ ಎಂದು ಅತಿಶಿ ಆರೋಪಿಸಿದ್ದಾರೆ. ‘‘ನಾನು ಸಿಎಂ ಆಗಿ ಆಯ್ಕೆಯಾದ ಬಳಿಕ ಬಿಜೆಪಿ ಕಾರ್ಯಕರ್ತರು ನಮ್ಮ ಎಲ್ಲ ವಸ್ತುಗಳನ್ನು ರಸ್ತೆಗೆ ಎಸೆದಿದ್ದಾರೆ. ಬಿಜೆಪಿಯವರು ನಮ್ಮ ನಿವಾಸಗಳನ್ನು ಕಿತ್ತುಕೊಂಡರೂ ದೆಹಲಿಯ ಜನರ ಒಳಿತಿಗಾಗಿ ಕೆಲಸ ಮಾಡುವುದನ್ನು ನಿಲ್ಲಿಸುವುದಿಲ್ಲ. ಅಗತ್ಯ ಬಿದ್ದರೆ ದೆಹಲಿಯ ಜನರ ಮನೆಗಳಲ್ಲಿಯೇ ಇದ್ದು ಅವರಿಗಾಗಿ ಕೆಲಸ ಮಾಡುತ್ತೇನೆ” ಎಂದರು.

ಮತ್ತೊಂದೆಡೆ ದೆಹಲಿ ವಿಧಾನಸಭಾ ಚುನಾವಣೆಯನ್ನು ಫೆಬ್ರವರಿ 5ರಂದು ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಇದೇ ತಿಂಗಳ 8ರಂದು ಮತ ಎಣಿಕೆ ನಡೆಯಲಿದೆ. ದೆಹಲಿಯಲ್ಲಿ ಒಟ್ಟು 1.55 ಕೋಟಿ ಮತದಾರರಿದ್ದಾರೆ. ಇವರಲ್ಲಿ 2.08 ಲಕ್ಷ ಹೊಸ ಮತದಾರರಿದ್ದಾರೆ ಎಂದು ಕೇಂದ್ರ ಚುನಾವಣಾ ಆಯೋಗ ಬಹಿರಂಗಪಡಿಸಿದೆ. 13,033 ಮತಗಟ್ಟೆ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಮತ್ತು ಎಲ್ಲಾ ಕೇಂದ್ರಗಳಲ್ಲಿ ವೆಬ್‌ಕಾಸ್ಟಿಂಗ್ ಲಭ್ಯವಾಗುವಂತೆ ಮಾಡಲಾಗುವುದು ಎಂದು ಹೇಳಿದರು. 85 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡುವ ಸೌಲಭ್ಯ ಕಲ್ಪಿಸಲಾಗುವುದು ಎಂದು ಹೇಳಲಾಗಿದೆ.

You cannot copy content of this page

Exit mobile version