Home ಬೆಂಗಳೂರು ಶುಚಿತ್ವಕ್ಕೆ ಆದ್ಯತೆ ನೀಡದಿದ್ದರೆ ಕಾನೂನು ಬದಲಾಗುತ್ತೆ ನೋಡ್ತಿರಿ – ಯು.ಟಿ ಖಾದರ್

ಶುಚಿತ್ವಕ್ಕೆ ಆದ್ಯತೆ ನೀಡದಿದ್ದರೆ ಕಾನೂನು ಬದಲಾಗುತ್ತೆ ನೋಡ್ತಿರಿ – ಯು.ಟಿ ಖಾದರ್

0

ಬೆಂಗಳೂರು: ರಾಜ್ಯದಲ್ಲಿ (Karnataka) ಸಾರ್ವಜನಿಕರ ಆರೋಗ್ಯ ಮತ್ತು ಕ್ಷೇಮವನ್ನು ಕಾಪಾಡುವ ನಿಟ್ಟಿನಲ್ಲಿ ಆಹಾರ ಸುರಕ್ಷತೆ (Food Safety) ಹಾಗೂ ಔಷಧ ಆಡಳಿತ ವಿಭಾಗವು ಸಮರೋಪಾದಿಯಲ್ಲಿ ಕಾರ್ಯಾಚರಣೆ ನಡೆಸುತ್ತಿದೆ. ಆದರೂ ಕೆಲವೆಡೆ ಮಾನದಂಡಗಳನ್ನು ಉಲ್ಲಂಘಿಸುತ್ತಿರುವುದು ಕಂಡುಬರುತ್ತಿದ್ದು, ಅದಕ್ಕೆ ಆದ್ಯತೆ ನೀಡದೇ ಹೋದಲ್ಲಿ ಕಾನೂನನ್ನೇ ಬದಲಿಸುವುದಾಗಿ ಆರೋಗ್ಯ ಸಚಿವ ಯುಟಿ ಖಾದರ್‌ (UT Khader) ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಇಂದು ‌ಆಹಾರ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಹಾರ ಸುರಕ್ಷತೆ ಮತ್ತು ಔಷಧಿ ಆಡಳಿತ ವಿಭಾಗಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡುದ ಸಚಿವರು, ಇಲಾಖೆಯ ಮುಖ್ಯಸ್ಥರು, ರಾಜ್ಯದ ವಿವಿಧೆಡೆ ನಡೆಸಿದ ತಪಾಸಣೆಗಳು ಹಾಗೂ ತೆಗೆದುಕೊಂಡಿರುವ ಕಟ್ಟುನಿಟ್ಟಿನ ಕ್ರಮಗಳ ಬಗ್ಗೆ ವಿವರಣೆ ನೀಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ವಿವಿಧ ಉಪಹಾರ ಗೃಹಗಳು, ಹೋಟೆಲ್‌ಗಳು ಮತ್ತು ಆಹಾರ ತಯಾರಿ ಕೇಂದ್ರಗಳಲ್ಲಿ ಶುಚಿತ್ವದ ಕೊರತೆ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಇಲಾಖೆಯು ವಿಶೇಷ ತಪಾಸಣಾ ಅಭಿಯಾನವನ್ನು ಕೈಗೆತ್ತಿಕೊಂಡಿದೆ. ಗುಣಮಟ್ಟವಿಲ್ಲದ ಹಾಗೂ ಅವಧಿ ಮುಗಿದ ಆಹಾರ ಪದಾರ್ಥಗಳನ್ನು ಬಳಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುತ್ತಿದ್ದು, ಹಲವು ಕೇಂದ್ರಗಳಿಗೆ ನೋಟಿಸ್‌ಗಳನ್ನು ಜಾರಿಗೊಳಿಸಲಾಗಿದೆ.

ಸಾರ್ವಜನಿಕರಿಗೆ ಸಿಗುವ ಆಹಾರ ಹಾಗೂ ಔಷಧಗಳು ಸುರಕ್ಷಿತವಾಗಿರಬೇಕು ಎಂಬುದೇ ಸರ್ಕಾರದ ಮುಖ್ಯ ಉದ್ದೇಶವಾಗಿದೆ. ಔಷಧ ನಿಯಂತ್ರಣ ವಿಭಾಗದ ಮೂಲಕ ನಕಲಿ ಹಾಗೂ ಕಳಪೆ ಔಷಧಗಳ ಮಾರಾಟ ತಡೆಯಲು ವಿಶೇಷ ನಿಗಾ ವಹಿಸಲಾಗಿದೆ. ಈ ನಿಟ್ಟಿನಲ್ಲಿ ಇಲಾಖೆಯ ಅಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ಯಾವುದೇ ಲೋಪದೋಷಗಳು ಕಂಡುಬಂದರೆ ಸಾರ್ವಜನಿಕರು ನೇರವಾಗಿ ಇಲಾಖೆಗೆ ದೂರು ನೀಡಬಹುದು ಎಂದು ತಿಳಿಸಲಾಗಿದೆ.

ಆಹಾರ ನೈರ್ಮಲ್ಯ ಹಾಗೂ ಔಷಧಗಳ ಸುರಕ್ಷತೆಯ ವಿಷಯದಲ್ಲಿ ಯಾವುದೇ ರೀತಿಯ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಇಲಾಖೆ, ಮುಂಬರುವ ದಿನಗಳಲ್ಲಿಯೂ ಈ ತಪಾಸಣಾ ಅಭಿಯಾನ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.

You cannot copy content of this page

Exit mobile version