Friday, June 14, 2024

ಸತ್ಯ | ನ್ಯಾಯ |ಧರ್ಮ

ದರ್ಶನ್ ರಕ್ಷಣೆಗೆ ರಾಜಕಾರಣಿಗಳು ಪೊಲೀಸರ ಮೇಲೆ ಒತ್ತಡ ಹೇರಿದರೆ?

ಬೆಂಗಳೂರು: ರೇಣುಕಾಸ್ವಾಮಿ ಸಾವೀಗೀಡಾಗುತ್ತಿದ್ದಂತೆ ಕಂಗಾಲಾದ ದರ್ಶನ್‌ ತನ್ನೊಂದಿಗೆ ಆತ್ಮೀಯರಾಗಿದ್ದ ರಾಜಕಾರಣಿಗಳಿಗೆ ಪದೆ ಪದೆ ಕರೆ ಮಾಡಿ ರಕ್ಷಣೆಗಾಗಿ ಬೇಡಿಕೊಂಡರು ಎಂದು ತಿಳಿದುಬಂದಿದೆ. ಇದರಿಂದ ಹಲವು ರಾಜಕಾರಣಿಗಳು ಪೊಲೀಸರಿಗೆ ಕರೆ ಮಾಡಿ ದರ್ಶನ್‌ ಅವರನ್ನು ಮುಟ್ಟಬೇಡಿ ಎಂದು ಒತ್ತಡ ಹಾಕಿದ್ದರು ಎಂಬುದು ಗೊತ್ತಾಗಿದೆ.

ದರ್ಶನ್‌ ಮುಖ್ಯವಾಗಿ ಕಾಂಗ್ರೆಸ್‌ನ ಇಬ್ಬರು ಪ್ರಭಾವಿ ಮುಖಂಡರು ಹಾಗೂ ಬಿಜೆಪಿಯ ಒಬ್ಬರು ಕರೆ ಮಾಡಿ ಗೋಗರೆದಿದ್ದಾರೆ. ಈ ಮುಖಂಡರು ಹಿರಿಯ ಪೊಲೀಸ್ ಅಧಿಕಾರಿಗಳ ಮೊಬೈಲ್‌ಗೆ ವಾಟ್ಸ್‌ಆ್ಯಪ್‌ ಮೂಲಕ 100ಕ್ಕೂ ಹೆಚ್ಚು ಬಾರಿ ಕರೆ ಮಾಡಿದ್ದಾರೆ. ಆದರೆ, ಹಿರಿಯ ಅಧಿಕಾರಿ ಕರೆ ಸ್ವೀಕರಿಸಿಲ್ಲ. ಇದರಿಂದ ಸಿಟ್ಟಾದ ಮುಖಂಡರು, ಗೃಹ ಸಚಿವರಿಗೆ ಕರೆ ಮಾಡಿರುವುದು ತಿಳಿದು ಬಂದಿದೆ.

 ಚಿತ್ರದುರ್ಗದ ರೇಣುಕಸ್ವಾಮಿ ಮರ್ಮಾಂಗಕ್ಕೆ ಹಲವು ಬಾರಿ ಒದ್ದು ಕೊಲೆ ಮಾಡಿದ್ದ ಆರೋಪ ಹೊತ್ತಿರುವ ನಟ ದರ್ಶನ್ ಮತ್ತು ಆತನ ಸಹಚರರು ಕೊಲೆ ಪ್ರಕರಣದಿಂದ ಪಾರಾಗಲು ಹಲವರಿಗೆ ಕೋಟಿ ಕೋಟಿ ರೂಪಾಯಿ ಆಮಿಷ ಒಡ್ಡಿದ್ದರು’ ಎಂಬುದು ಪೊಲೀಸರ ತನಿಖೆಯಿಂದ ಗೊತ್ತಾಗಿದೆ.

ರೇಣುಕಸ್ವಾಮಿ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು, ಆರೋಪಿಗಳನ್ನು ಕಸ್ಟಡಿಗೆ ಪಡೆದು ಪ್ರತ್ಯೇಕವಾಗಿ ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಗಳು ನಾನಾ ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಈ ವಿಚಾರಣೆ ವೇಳೆ ಅನೇಕ ಮಾಹಿತಿಗಳು ಬಯಲಿಗೆ ಬಂದಿದ್ದು, ಅದರಲ್ಲಿ ಇದು ಕೂಡ ಸೇರಿದೆ.

ತನಿಖಾಧಿಕಾರಿ ದಿಡೀರ್‌ ವರ್ಗ: ರೇಣುಕಸ್ವಾಮಿ ಕೊಲೆ ಪ್ರಕರಣದ ತನಿಖಾಧಿಕಾರಿಯಾದ ಕಾಮಾಕ್ಷಿಪಾಳ್ಯ ಇನ್‌ಸ್ಪೆಕ್ಟರ್ ಗಿರೀಶ್ ನಾಯ್ಕ್ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ. ಈಗ ಪ್ರಕರಣದ ತನಿಖೆ ಹೊಣೆಯನ್ನು ವಿಜಯನಗರ ಉಪವಿಭಾಗದ ಎಸಿಪಿ ಚಂದನ್ ವಹಿಸಿಕೊಂಡಿದ್ದಾರೆ. ಆದರೆ ಇದು ದಿಡೀರ್‌ ವರ್ಗಾವಣೆ ಅಲ್ಲ, ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯ ಇನ್‌ಸ್ಪೆಕ್ಟರ್ ಆಗಿದ್ದ ಗಿರೀಶ್ ಅವರನ್ನು ಚುನಾವಣೆ ನಿಮಿತ್ತ ಕಾಮಾಕ್ಷಿಪಾಳ್ಯ ಠಾಣೆಗೆ ತಾತ್ಕಾಲಿಕವಾಗಿ ವರ್ಗಾಯಿಸಲಾಗಿತ್ತು. ಇದೀಗ, ಅವರನ್ನು ಪುನಃ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಗೆ ವರ್ಗಾಯಿಸಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

Related Articles

ಇತ್ತೀಚಿನ ಸುದ್ದಿಗಳು