Tuesday, January 7, 2025

ಸತ್ಯ | ನ್ಯಾಯ |ಧರ್ಮ

ಹುಟ್ಟುಹಬ್ಬ ಆಚರಿಸಿಕೊಂಡು ಹಾಸ್ಟೆಲ್ ಕಟ್ಟಡದಿಂದ ಬಿದ್ದು ಐಐಎಂ ವಿದ್ಯಾರ್ಥಿ ಸಾವು

ಬೆಂಗಳೂರು: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (ಐಐಎಂ) ವಿದ್ಯಾರ್ಥಿಯೊಬ್ಬ ತನ್ನ ಹುಟ್ಟುಹಬ್ಬವನ್ನು ಮಧ್ಯರಾತ್ರಿ ಸ್ನೇಹಿತರೊಂದಿಗೆ ಆಚರಿಸಿಕೊಂಡಿದ್ದಾನೆ. ಗೆಳೆಯರೊಂದಿಗೆ ಕೇಕ್ ಕತ್ತರಿಸಿ ಖುಷಿ ಪಟ್ಟರು.

ಆ ಬಳಿಕ ಮತ್ತೆ ಹಾಸ್ಟೆಲ್‌ಗೆ ಹೋಗುವಾಗ ಕಟ್ಟಡದ ಎರಡನೇ ಮಹಡಿಯಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ. ಗುಜರಾತ್‌ನ ಸೂರತ್‌ನ ನಿಲಯ್ ಕೈಲಾಶ್‌ಭಾಯ್ ಪಟೇಲ್ ಬೆಂಗಳೂರಿನ ಐಐಎಂನಲ್ಲಿ ಪಿಜಿಪಿ ಓದುತ್ತಿದ್ದರು. ಜನವರಿ 4ರಂದು ಅವರಿಗೆ 29 ವರ್ಷ ತುಂಬಿತ್ತು. ಈ ಹಿನ್ನೆಲೆಯಲ್ಲಿ ಮಧ್ಯರಾತ್ರಿ ಹಾಸ್ಟೆಲ್‌ನಲ್ಲಿರುವ ಸ್ನೇಹಿತರೊಬ್ಬರ ಕೊಠಡಿಯಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಸ್ನೇಹಿತರೊಂದಿಗೆ ಕೇಕ್ ಕತ್ತರಿಸಿವ ಆ ನಂತರ ಮತ್ತೆ ಹಾಸ್ಟೆಲ್‌ನಲ್ಲಿರುವ ತನ್ನ ಕೋಣೆಗೆ ನಡೆದರು.

ಇದೇ ವೇಳೆ ಭಾನುವಾರ ಬೆಳಗ್ಗೆ 6.30ರ ವೇಳೆ ನಿಲಯ್ ಕೈಲಾಸಭಾಯ್ ಪಟೇಲ್ ಹಾಸ್ಟೆಲ್ ಕಟ್ಟಡದಲ್ಲಿ ಬಿದ್ದಿರುವುದನ್ನು ಭದ್ರತಾ ಸಿಬ್ಬಂದಿ ಗಮನಿಸಿದ್ದಾರೆ. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅದಾಗಲೇ ನಿಲಯ್ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಮತ್ತೊಂದೆಡೆ ಈ ವಿಷಯ ತಿಳಿದ ಪೊಲೀಸರು ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಹುಟ್ಟುಹಬ್ಬದ ಸಂಭ್ರಮಾಚರಣೆ ಮುಗಿಸಿ ಹಾಸ್ಟೆಲ್‌ನಲ್ಲಿರುವ ಕೊಠಡಿಗೆ ಹೋಗುತ್ತಿದ್ದಾಗ ಎರಡನೇ ಮಹಡಿಯಿಂದ ಕೆಳಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಏತನ್ಮಧ್ಯೆ, ಐಐಎಂ-ಬಿ ನಿಲಯ್ ಸಾವಿಗೆ ಸಂತಾಪ ಸೂಚಿಸಿದೆ. ಒಬ್ಬ ಪ್ರತಿಭಾವಂತ ಮತ್ತು ಸ್ನೇಹಪರ ವಿದ್ಯಾರ್ಥಿಯನ್ನು ಕಳೆದುಕೊಂಡಿರುವುದಾಗಿ ಅದು ತಿಳಿಸಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page