Friday, March 14, 2025

ಸತ್ಯ | ನ್ಯಾಯ |ಧರ್ಮ

ಅಕ್ರಮ ಚಿನ್ನ ವರ್ಗಾವಣೆ ಪ್ರಕರಣ; ರನ್ಯಾ ರಾವ್ ಜಾಮೀನು ಅರ್ಜಿ ವಜಾ

ಅಕ್ರಮವಾಗಿ ಚಿನ್ನ ವರ್ಗಾವಣೆ ಪ್ರಕರಣದಲ್ಲಿ ಈಗಾಗಲೇ ಜೈಲು ಪಾಲಾಗಿರುವ ರನ್ಯಾ ರಾವ್ ಅವರಿಗೆ ಹೈಕೋರ್ಟ್ ಮತ್ತೊಂದು ಶಾಕ್ ನೀಡಿದೆ. ಪ್ರಕರಣದ ಅಡಿಯಲ್ಲಿ ವಿಚಾರಣೆ ನಡೆಸಿದ ಹೈಕೋರ್ಟ್ ರನ್ಯಾ ರಾವ್ ಅವರ ಜಾಮೀನು ಅರ್ಜಿ ತಿರಸ್ಕರಿಸಿದೆ.

ಅವರು ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ಆರ್ಥಿಕ ಅಪರಾಧಗಳ ನ್ಯಾಯಾಲಯ ನಡೆಸಿತು. ವಾದ, ಪ್ರತಿವಾದವನ್ನು ಆಲಿಸಿದಂತ ಕೋರ್ಟ್ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.

ಚಿನ್ನ ಸಾಗಾಣಿಕೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಬಂಧಿಸಲಾಗಿದೆ. ಅವರಿಗೂ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಪ್ರಕರಣದಲ್ಲಿ ಜಾಮೀನು ನೀಡುವಂತೆ ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯಕ್ಕೆ ಅರ್ಜಿಯನ್ನು ಸಲ್ಲಿಸಲಾಗಿತ್ತು. ಈ ಅರ್ಜಿಯ ವಿಚಾರಣೆ ವೇಳೆ ಡಿ ಆರ್ ಐ ಪರ ವಕೀಲ ಮಧು ರಾವ್ ವಾದ ಮಂಡಿಸಿದ್ದರು.

ಕಸ್ಟಡಿ ಅವಧಿಯಲ್ಲಿ ನಟಿ ರನ್ಯಾ ರಾವ್ ಅವರು ತನಿಖೆಗೆ ಯಾವುದೇ ರೀತಿಯಲ್ಲಿ ಸಹಕರಿಸಿಲ್ಲ. ಅಪರಾಧದ ಮನಸ್ಥಿತಿಯ ಬಗ್ಗೆ ಪರಿಶೀಲಿಸಬೇಕು. ಜಾಮೀನು ನೀಡಿದರೇ ಸಮಸ್ಯೆ ಆಗಲಿದೆ. ಮಹಿಳೆಯಾಗಿದ್ದರೂ ಕೂಡ ಬೇಲ್ ನೀಡಬಾರದು. ದೊಡ್ಡ ಮಟ್ಟದ ಸ್ಮಗ್ಲಿಂಗ್ ಆಗಿರುವುದು ಪರಿಗಣಿಸಬೇಕು ಎಂಬುದಾಗಿ ವಾದಿಸಿದ್ದರು.

ವಾದ ಪ್ರತಿವಾದವನ್ನು ಆಲಿಸಿದಂತ ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯವು, ಅಕ್ರಮ ಚಿನ್ನ ಸಾಗಾಣಿಕೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ಆದೇಶವನ್ನು ಮಾರ್ಚ್.14ಕ್ಕೆ ಕಾಯ್ದಿರಿಸಿತ್ತು.

ಅದರಂತೆ ವಾದ ಪ್ರತಿವಾದದ ಅಡಿಯಲ್ಲಿ ರನ್ಯಾ ರಾವ್ ಜಾಮೀನು ಅರ್ಜಿಯನ್ನು ವಜಾ ಮಾಡಿದೆ. ಒಟ್ಟು 4,83,72,694 ರೂ ವಂಚನೆಯಾಗಿದೆ. ಆಕೆಯ ಬಳಿಯಲ್ಲಿ ದುಬೈ ರೆಸಿಡೆಂಟ್ ಐಡೆಂಟಿಟಿ ಕಾರ್ಡ್ ಇದೆ. ಹೀಗಾಗಿ ಜಾಮೀನು ನೀಡದಂತೆ ಮನವಿ ಮಾಡಲಾಗಿತ್ತು. ಈ ಮನವಿ ಪುರಸ್ಕರಿಸಿರುವಂತ ಕೋರ್ಟ್, ಇಂದು ನಟಿ ರನ್ಯಾ ರಾವ್ ಚಿನ್ನಸಾಗಾಣಿಕೆ ಕೇಸಲ್ಲಿ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page