Saturday, October 12, 2024

ಸತ್ಯ | ನ್ಯಾಯ |ಧರ್ಮ

ಕರ್ನಾಟಕ ಸೇರಿ 7 ರಾಜ್ಯಗಳಲ್ಲಿ ಬಾರಿ ಮಳೆ ಮುನ್ಸೂಚನೆ ನೀಡಿದ ‘IMD’ ; ರೆಡ್ ಅಲರ್ಟ್ ಘೋಷಣೆ

ಇನ್ನು ಇಪ್ಪತ್ನಾಲ್ಕು ಗಂಟೆಗಳಲ್ಲಿ ಕರ್ನಾಟಕ ಸೇರಿ ಒಟ್ಟು 7 ರಾಜ್ಯಗಳಲ್ಲಿ ಬಾರಿ ಮಳೆಯ ಮುನ್ಸೂಚನೆ ನೀಡಿದ್ದು ದಕ್ಷಿಣ ಭಾರತದ ಹಲವೆಡೆ ಮಳೆ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕ, ತಮಿಳುನಾಡು, ಕೇರಳ, ಗೋವಾ, ಮಹಾರಾಷ್ಟ್ರ, ಗುಜರಾತ್ ಸೇರಿ ಅರುಣಾಚಲ ಪ್ರದೇಶ ಅಕ್ಟೋಬರ್ 12 ರಂದು ಭಾರೀ ಮಳೆಯಾಗಲಿದೆ ಎಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉಡುಪಿ ದಕ್ಷಿಣ ಕನ್ನಡ ಉತ್ತರ ಕನ್ನಡ ಭಾಗಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಗೆಯೇ ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಇಂದು ಮಳೆ ಮುಂದುವರೆಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಮುಂದಿನ 2 ದಿನಗಳಲ್ಲಿ ಅಸ್ಸಾಂ ಮತ್ತು ಮೇಘಾಲಯದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಅಕ್ಟೋಬರ್ 13 ರಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಲಘು ಮಳೆಯಾಗಲಿದೆ.

ಬಹುತೇಕ ಈ ಮಳೆಯ ಮೂಲಕ ಈ ಬಾರಿಯ ಮಾನ್ಸೂನ್ ಸಹ ಮುಕ್ತಾಯವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಭಾರತದ ಉತ್ತರ ಭಾಗದಿಂದ ಚಳಿ ಶುರುವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಮಧ್ಯಪ್ರದೇಶ, ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ, ಬಿಹಾರ ಮತ್ತು ಜಾರ್ಖಂಡ್‌ನ ಕೆಲವು ಭಾಗಗಳಿಂದ 1 ಅಥವಾ 2 ದಿನಗಳಲ್ಲಿ ಹೊರಡಬಹುದು. ಈಗ ಈ ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆ ಇಲ್ಲ. ಅದೇ ಸಮಯದಲ್ಲಿ, ಯುಪಿಯ ಹಲವೆಡೆ ಬೆಳಿಗ್ಗೆ ಲಘು ಮಂಜು ಕೂಡ ಕಂಡುಬರುತ್ತದೆ. ದೆಹಲಿ-ಎನ್‌ಸಿಆರ್ ಸೇರಿದಂತೆ ರಾಜ್ಯಗಳಲ್ಲಿ ಮುಂಜಾನೆ ಸ್ವಲ್ಪ ಚಳಿಯ ಅನುಭವವಾಗುತ್ತಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page