ನವದೆಹಲಿ : ಕೇಂದ್ರ ಬಜೆಟ್ ಅಧಿವೇಶನದಲ್ಲಿ ಗುರುವಾರವೂ ಗದ್ದಲ ಕೋಲಾಹಲ ಸೃಷ್ಟಿಯಾಗಿದೆ. ಸ್ಪೀಕರ್ ಓಂ ಪ್ರಕಾಶ್ ಬಿರ್ಲಾ ಸದನವನ್ನು ಮಧ್ಯಾಹ್ನದವರೆಗೆ ಮುಂದೂಡಿದ್ದಾರೆ ಅಮೆರಿಕದಲ್ಲಿರುವ ಭಾರತದ ವಲಸಿಗರನ್ನು ವಾಪಸ್ ಭಾರತಕ್ಕೆ ಕಳುಹಿಸುವಸ್ ನಿಟ್ಟಿನಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ.ಇದೇ ವಿಚಾರ ಸಂಸತ್ ನಲ್ಲಿ ಪ್ರತಿಧ್ವನಿಸಿದ್ದು ,ಕಲಾಪದಲ್ಲಿ ದೊಡ್ಡ ಗದ್ದಲ ಸೃಷ್ಟಿಯಾಗಿತ್ತು.
ಅಕ್ರಮ ವಲಸಿಗರ ವಿರುದ್ಧ ಕಠಿಣ ಕ್ರಮ ಆರಂಭಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸರ್ಕಾರ, ಅದರ ಭಾಗವಾಗಿ ಇದೀಗ ಭಾರತೀಯ ಮೂಲದ ಅಕ್ರಮ ನಿವಾಸಿಗಳನ್ನು ಸ್ವದೇಶಕ್ಕೆ ವಾಪಸ್ ಕಳುಹಿಸುವ ಕಾರ್ಯಕ್ಕೆ ಚಾಲನೆ ನೀಡಿದೆ. ಕೇಂದ್ರ ಸರ್ಕಾರ ಸಹ ಇದಕ್ಕೆ ಒಪ್ಪಿಗೆ ಸೂಚಿಸಿದೆ
ಅಕ್ರಮ ವಲಸಿಗರ ವಾಪಸಾತಿ ಬಗ್ಗೆ ಚರ್ಚೆಗೆ ವಿಪಕ್ಷಗಳು ಪಟ್ಟು ಹಿಡಿದವು. ಬಿಜೆಪಿ ಹಾಗೂ ವಿಪಕ್ಷ ಸದಸ್ಯರ ನಡುವೆ ಮಾತಿನ ಚಕಮಕಿ ಜೋರಾಗಿ ನಡೆಯಿತು. ಪರಸ್ಪರ ಆರೋಪ ಪ್ರತ್ಯಾರೋಪ ನಡೆಯಿತು. ಮಾತಿನ ಚಕಮಕಿ ಹೆಚ್ಚಾಗುತ್ತಿದ್ದಂತೆ ಕಲಾಪವನ್ನು ಸ್ಪೀಕರ್ ಮುಂದೂಡಿದರು.