ಬೆಂಗಳೂರು : ರಾಜ್ಯ ಸರ್ಕಾರವು ಮಹಿಳಾ ಸ್ವಸಹಾಯ ಗುಂಪುಗಳಿಗೆ ನೆರವಾಗಲು ಮುಂದಾಗಿದೆ. ಸ್ವಸಹಾಯ ಗುಂಪುಗಳಿಗೆ ಭರ್ಜರಿ ಸಿಹಿ ಸುದ್ದಿ ನೀಡಿರುವ ಸರ್ಕಾರವು ಚಿಟ್ ಫಂಡ್ ವ್ಯವಸ್ಥೆ ಜಾರಿ ಮಾಡಲು ಚಿಂತನೆ ನಡೆಸಿದೆ.

ಈ ಕುರಿತು ಮಾಹಿತಿ ನೀಡಿರುವ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು, ಕೇರಳ ರಾಜ್ಯದ ಮಾದರಿಯಲ್ಲಿ ಎಂ.ಎಸ್.ಐ.ಎಲ್. ಮೂಲಕ ನಮ್ಮಲ್ಲೂ ಚಿಟ್ ಫಂಡ್ ವ್ಯವಸ್ಥೆ ಜಾರಿ ಮಾಡಲಾಗುವುದು. ಆ ಮೂಲಕ ಮಹಿಳಾ ಸ್ವಸಹಾಯ ಗುಂಪುಗಳಿಗೆ ಶಕ್ತಿ ತುಂಬಲು ಚಿಂತನೆ ನಡೆಸಲಾಗುತ್ತಿದೆ ಎಂದರು.
ಸರ್ಕಾರದ ಬೆಂಬಲವಿರುವ ಈ ಚಿಟ್ ಫಂಡ್ ವ್ಯವಸ್ಥೆ ಸಂಪೂರ್ಣವಾಗಿ ಸುರಕ್ಷಿತ ಮತ್ತು ವಿಶ್ವಾಸಾರ್ಹವಾಗಿರಲಿದೆ. ಇದು ಮಹಿಳಾ ಶಕ್ತಿ ಮತ್ತು ಆತ್ಮವಿಶ್ವಾಸವನ್ನು ಉತ್ತೇಜಿಸುವಲ್ಲಿ ಮಹತ್ವದ ಹೆಜ್ಜೆಯಾಗಲಿದೆ ಎಂದು ಅಭಿಪ್ರಾಯಪಟ್ಟರು.