ಉತ್ತರ ಪ್ರದೇಶದ ನಂತರ ಅತಿ ಹೆಚ್ಚು ಲೋಕಸಭೆ ಕ್ಷೇತ್ರಗಳನ್ನು ಹೊಂದಿದ್ದ ಮಹಾರಾಷ್ಟ್ರದಲ್ಲಿ ಬಿಜೆಪಿ ಬಾರಿ ಕ್ಷೇತ್ರಗಳಲ್ಲಿ ಹಿನ್ನಡೆ ಸಾಧಿಸಿದೆ. ಆ ಮೂಲಕ ದೊಡ್ಡ ದೊಡ್ಡ, ನಿರೀಕ್ಷೆ ಇರಿಸಿಕೊಂಡಿದ್ದ ಕ್ಷೇತ್ರಗಳೇ ಬಿಜೆಪಿಗೆ ಮುಳುವಾಗುವ ಸಂಭವ ಎದ್ದು ಕಾಣುವಂತಿದೆ.
ಉತ್ತರ ಪ್ರದೇಶದಲ್ಲಿ 40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ ‘ಇಂಡಿಯಾ’ ಮೈತ್ರಿಕೂಟ, ಅಷ್ಟೇ ಕ್ಷೇತ್ರಗಳಲ್ಲೂ ಮಹಾರಾಷ್ಟ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಬಹುತೇಕ ಕ್ಷೇತ್ರಗಳಲ್ಲಿ ‘ಇಂಡಿಯಾ’ ಮೈತ್ರಿಕೂಟದ ಉದ್ಧವ ಠಾಕ್ರೆ ಬಣದ ಶಿವಸೇನೆ ಮೇಲೆ ಅನುಕಂಪದ ವಾತಾವರಣ ಸೃಷ್ಟಿಯಾದ ಬೆನ್ನಲ್ಲೇ ಈ ಫಲಿತಾಂಶ ನಿರೀಕ್ಷಿತ ಎನ್ನುವಂತಿದೆ.
ಈ ಬೆಳವಣಿಗೆ ನೋಡಿದರೆ ದೇಶದ ಅಧಿಕಾರದ ಚುಕ್ಕಾಣಿ ಹಿಡಿಯಲು ಈ ಎರಡೂ ರಾಜ್ಯಗಳು ಪ್ರಮುಖ ಪಾತ್ರ ವಹಿಸುವ ಕಾರಣ ಇಲ್ಲಿ ಬಹುಮತ ಸಾಧಿಸುವ ಯಾವುದೇ ಒಕ್ಕೂಟ ಕೇಂದ್ರದ ಅಧಿಕಾರ ಹಿಡಿಯುವುದು ಪಕ್ಕಾ ಎನ್ನುವಂತಿದೆ.