ಚನ್ನಪಟ್ಟಣ : ಮೈಸೂರು-ಬೆಂಗಳೂರು ನಡುವೆ ಪ್ರಯಾಣಿಸುವ ರೈಲು ಪ್ರಯಾಣಿಕರು ಬೆಚ್ಚಿಬಿದ್ದಿದ್ದಾರೆ. ಮೈಸೂರಿನಿಂದ ಬೆಂಗಳೂರಿಗೆ ಚಲಿಸುತ್ತಿದ್ದ ಉದಯಪುರ ಎಕ್ಸೆಸ್ ರೈಲಿನ ಇಂಜಿನ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತುಕೊಂಡ ಸಿಬ್ಬಂದಿ ರೈಲನ್ನು ನಿಲ್ಲಿಸಿ ಬೆಂಕಿ ನಂದಿಸಿದ್ದಾರೆ. ಬೆಂಗಳೂರಿನ ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ ಘಟನೆ ನಡೆದಿದೆ. ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.
ವಂದರಗುಪ್ಪೆ ಬಳಿ ರೈಲು ನಿಲ್ಲಿಸಿ ಸಿಬ್ಬಂದಿ ಕೂಡಲೇ ಬೆಂಕಿ ನಂದಿಸಿದ್ದಾರೆ. ಬೆಂಕಿಯ ತೀವ್ರತೆ ಹೆಚ್ಚಾಗುವ ಮುನ್ನವೇ ಸಿಬ್ಬಂದಿ ಹಾಗೂ ಸ್ಥಳೀಯರು ಸಮಯಪ್ರಜ್ಞೆ ಮೆರೆದಿದ್ದಾರೆ. ಈ ವೇಳೆ ಸಾಕಷ್ಟು ಪ್ರಯಾಣಿಕರು ಆತಂಕಗೊಂಡಿದ್ದಾರೆ. ಘಟನೆ ಕುರಿತು ಹಿರಿಯ ಅಧಿಕಾರಿಗಳು ಮಾಹಿತಿ ಸಂಗ್ರಹಿಸಿದ್ದಾರೆ.