Thursday, November 6, 2025

ಸತ್ಯ | ನ್ಯಾಯ |ಧರ್ಮ

ಡೆಂಗ್ಯೂ ಹೆಚ್ಚಳ: ಸ್ವಯಂಪ್ರೇರಿತ ಅರ್ಜಿ ದಾಖಲಿಸಿಕೊಂಡು ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಕೋರ್ಟ್‌

ಬೆಂಗಳೂರು: ಮಳೆಗಾಲವಾದ್ದರಿಂದ ದಿನದಿಂದ ದಿನಕ್ಕೆ ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಲೇ ಇವೆ ಈ ಕುರಿತು ಕಳವಳ ವ್ಯಕ್ತಪಡಿಸಿರುವ ಹೈಕೋರ್ಟ್, ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದ್ದಲ್ಲದೇ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

ರಾಜ್ಯದ ಪತ್ರಿಕೆಯೊಂದಕ್ಕೆ ರಾಯಚೂರಿನ ವಿಜಯ್ ಕುಮಾರ್ ಎಚ್.ಕೆ ಬರೆದ ಪತ್ರ ಆಧರಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈ ಕೋರ್ಟ್‌ ದಾಖಲಿಸಿಕೊಂಡಿದೆಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕರಿಗೆ ಆರೋಗ್ಯ ಹಾಗೂ ಚಿಕಿತ್ಸೆಯ ಹಕ್ಕಿದೆ. ಈ ಹಕ್ಕನ್ನು ಪೂರ್ತಿ ಮಾಡುವುದು ಸರ್ಕಾರದ ಕರ್ತವ್ಯ. ಬೆಂಗಳೂರು ಮತ್ತು ಗ್ರಾಮೀಣ ಭಾಗದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಲೇ ಇದ್ದು, ಕೂಡಲೇ ಸೂಕ್ತ ಕ್ರಮ ಕೈಗೊಳ್ಳಿ ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ, ನ್ಯಾ.ಕೆ.ವಿ.ಅಂಜಾರಿಯಾ ಅವರಿದ್ದ ಪೀಠ ಆತಂಕ ವ್ಯಕ್ತಪಡಿಸಿತು.

ಪಿಐಎಲ್‌ ಅರ್ಜಿಗೆ ಉತ್ತರಿಸುವಂತೆ ಸರಕಾರದ ಮುಖ್ಯ ಕಾರ್ಯದರ್ಶಿ, ಆರೋಗ್ಯ ಇಲಾಖೆಯ ಕಾರ್ಯದರ್ಶಿಗೂ ತುರ್ತು ಹೈಕೋರ್ಟ್‌ ನೋಟಿಸ್ ಜಾರಿಗೊಳಿಸಿದೆ. ಜುಲೈ 23ರೊಳಗೆ ಡೆಂಗ್ಯೂ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳನ್ನು ತಿಳಿಸಿ ಎಂದು ಸರಕಾರಕ್ಕೆ ಸೂಚಿಸಿದೆ. ಗ್ರಾಮೀಣ ಹಾಗೂ ನಗರದಲ್ಲಿ ವೈದ್ಯಕೀಯ ಸೌಲಭ್ಯಗಳು. ಸೊಳ್ಳೆಗಳ ಸಂತಾನ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳು.‌ ಜನ ಜಾಗೃತಿ ಕ್ರಮಗಳ ಬಗ್ಗೆ ವಿವರ ನೀಡಲು ಹೈಕೋರ್ಟ್, ರಾಜ್ಯ ಸರಕಾರಕ್ಕೆ ಸಲಹೆ ನೀಡಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page