Friday, June 14, 2024

ಸತ್ಯ | ನ್ಯಾಯ |ಧರ್ಮ

ಮೀಸಲಾತಿ ಹೆಚ್ಚಳ, ದೇಶಾದ್ಯಂತ ಜಾತಿ ಗಣತಿ – ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಭರವಸೆ

ಹೊಸದಿಲ್ಲಿ, ಏಪ್ರಿಲ್ 5: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಶುಕ್ರವಾರ ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿರುವ ಪ್ರಣಾಳಿಕೆ ಭರವಸೆಗಳಿಂದಲೇ ತುಂಬಿತ್ತು. ಕನಿಷ್ಠ ಬೆಂಬಲ ಬೆಲೆಯ ನ್ಯಾಯಸಮ್ಮತತೆ, ಮೀಸಲಾತಿ ಮಿತಿಯನ್ನು ಶೇಕಡಾ 50 ರಷ್ಟು ಹೆಚ್ಚಿಸಲು ಸಂವಿಧಾನ ತಿದ್ದುಪಡಿ, ದೇಶಾದ್ಯಂತ ಜಾತಿ ಗಣತಿ ನಿರ್ವಹಣೆ, ಅಗ್ನಿಪಥ್ ಯೋಜನೆ ರದ್ದತಿ ಇತ್ಯಾದಿ.

ಈ ನಿಟ್ಟಿನಲ್ಲಿ ಶುಕ್ರವಾರ ‘ನ್ಯಾಯ ಪತ್ರ’ ಹೆಸರಿನಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಲಾಗಿದೆ. ಜಮ್ಮು ಮತ್ತು ಕಾಶ್ಮೀರ ಮತ್ತು ಪುದುಚೇರಿಗೆ ಸಂಪೂರ್ಣ ರಾಜ್ಯದ ಸ್ಥಾನಮಾನ ಮತ್ತು ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವುದಾಗಿ ಕಾಂಗ್ರೆಸ್ ಹೇಳಿದೆ.

ಅದೇ ರೀತಿ ಕೇಂದ್ರ ಸರ್ಕಾರದ ಮಟ್ಟದಲ್ಲಿ 30 ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಹಾಗೂ 2025ರಿಂದ ಕೇಂದ್ರ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಭರವಸೆ ನೀಡಿದೆ. 25 ಲಕ್ಷ ಆರೋಗ್ಯ ವಿಮೆ ಸೌಲಭ್ಯ, ಮಹಾಲಕ್ಷ್ಮಿ ಯೋಜನೆಯಡಿ ದೇಶದ ಬಡ ಮಹಿಳೆಯರಿಗೆ ಒಂದು ಲಕ್ಷ ರೂ. ಕೊಡುಗೆ. ಉದ್ಯೋಗ ಖಾತ್ರಿ ಯೋಜನೆಯಡಿ ದಿನಗೂಲಿ ರೂ.400 ನೀಡಲಾಗುವುದು ಎಂದು ಘೋಷಿಸಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು