Wednesday, July 3, 2024

ಸತ್ಯ | ನ್ಯಾಯ |ಧರ್ಮ

ಜಾರ್ಖಂಡ್ ನಲ್ಲಿ ಗರಿಗೆದರಿದ ರಾಜಕೀಯ ಬೆಳವಣಿಗೆ ; ಹಾಲಿ ಸಿಎಂ ಚಂಪೈ ಸೊರೆನ್ ರಾಜೀನಾಮೆ

ಜಾರ್ಖಂಡ್ ರಾಜ್ಯದ ಹಾಲಿ ಮುಖ್ಯಮಂತ್ರಿ ಚಂಪೈ ಸೊರೆನ್ ಬುಧವಾರ ಸಂಜೆ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದು, ಹಿಂದಿನ ಮುಖ್ಯಮಂತ್ರಿ, ಜಾರ್ಖಂಡ್ ಮುಕ್ತಿ ಮೋರ್ಚಾ ನಾಯಕ ಹೇಮಂತ್ ಸೊರೆನ್ ಮತ್ತೆ ಸಿಎಂ ಆಗಿ ಮರಳಲು ವೇದಿಕೆ ಕಲ್ಪಿಸಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿ ಜೈಲು ಪಾಲಾದ ಬಳಿಕ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೇನ್ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆ ಬಳಿಕ ಜಾರ್ಖಂಡ್ ನೂತನ ಮುಖ್ಯಮಂತ್ರಿಯಾಗಿ ಚಂಪೈ ಸೊರೆನ್ ಅಧಿಕಾರ ಗದ್ದುಗೆಗೆ ಏರಿದರು.

ಹೇಮಂತ್ ಸೊರೆನ್ ಅವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದ ಬಳಿಕ, ಜೈಲಿನಿಂದ ಬಿಡುಗಡೆ ಆಗಿದ್ದಾರೆ. ಇದರ ಬೆನ್ನಲ್ಲೇ ಹೇಮಂತ್ ಸೊರೆನ್ ಮತ್ತೆ ಜಾರ್ಖಂಡ್ ಸಿಎಂ ಸ್ಥಾನಕ್ಕೇರುವ ಎಲ್ಲಾ ತಯಾರಿ ಜಾರ್ಖಂಡ್ ನಲ್ಲಿ ನಡೆದಿದೆ ಎನ್ನಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು