ಮೊಹಾಲಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟಿ-20 ಸರಣಿಯು ಸೆಪ್ಟಂಬರ್ 20 ಮಂಗಳವಾರದಂದು ಆರಂಭಗೊಳ್ಳಲಿದ್ದು, ಸರಣಿಯ ಮೂರು ಪಂದ್ಯಗಳು ಮೊಹಲಿಯಲ್ಲಿ ನಡೆಯಲಿವೆ.
ಈ ಸರಣಿಯ ಮೊದಲ ಪಂದ್ಯವು ನಾಳೆಯಿಂದ ಶುರುವಾಗಲಿದ್ದು, ಪಂದ್ಯವು ನಾಳೆ ಸಂಜೆ 7: 30 ರಿಂದ ಆರಂಭಗೊಳ್ಳಲಿದೆ.
ಮುಂಬರುವ ಟಿ-20 ವಿಶ್ವಕಪ್ ಹಿನ್ನಲೆ ಉಭಯ ತಂಡಗಳಿಗು ಈ ಸರಣಿಯು ಒಂದು ರೀತಿ ಅಭ್ಯಾಸ ಪಂದ್ಯಗಳಾಗಿವೆ.
ಏಷ್ಯಾಕಪ್ ಸೋಲಿನ ಬಳಿಕ ಭಾರತ ತಂಡಕ್ಕೆ ಪ್ಲೆಯಿಂಗ್ 11 ಆಟಗಾರರನ್ನು ನೇಮಿಸುವು ಪ್ರಕ್ರಿಯೆ ನಡೆಯುತ್ತಿದ್ದು, ಈ ಸರಣಿಯು ಅದಕ್ಕೆ ಅನೂಕೂಲಕರವಾಗಿದೆ.
ಈ ಮೂರು ಸರಣಿಯಲ್ಲಿ ಭಾರತ ತಂಡವು ವಿಶ್ವ ಚಾಂಪಿಯನ್ ಎಂದು ಗುರಿತಿಸಿಕೊಂಡಿರುವ ಆಸ್ಟ್ರೇಲಿಯಾದ ವಿರುದ್ಧ ಉತ್ತಮ ಪ್ರದರ್ಶನ ನೀಡಿದರೆ ಮುಂಬರುವ ಟಿ-20 ವಿಶ್ವಕಪ್ನಲ್ಲಿ ಗೆಲ್ಲುವ ಭರವಸೆ ಹೊಂದುತ್ತದೆ ಎಂದು ಮಾಜಿ ಕ್ರಿಕೆಟ್ ಆಟಗಾರರು ಅಭಿಪ್ರಾಯಪಟ್ಟಿದ್ದಾರೆ.
ಈ ಕಾರಣ ಆಸೀಸ್ ವಿರುದ್ಧದ ಈ ಸರಣಿಯಲ್ಲಿ ಟೀಮ್ ಇಂಡಿಯಾ ಕೆಲ ಪ್ರಯೋಗಗಳನ್ನು ಮಾಡುವ ಸಾಧ್ಯತೆಯಿದೆ.
ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ನಡೆಯುವ ಈ ಸರಣಿಯಲ್ಲಿ ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಹಾಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್ , ಮೊಹಮ್ಮದ್ ಶಮಿ, ಹರ್ಷಲ್ ಪಟೇಲ್, ದೀಪಕ್ ಚಹಾರ್, ಜಸ್ಪ್ರೀತ್ ಬುಮ್ರಾ ತಂಡದಲ್ಲಿರಲಿದ್ದಾರೆ.
ಅದೇ ರೀರಿ ಆಸ್ಟ್ರೇಲಿಯಾ ತಂಡದಲ್ಲಿ ಆರೋನ್ ಫಿಂಚ್ (ನಾಯಕ), ಸೀನ್ ಅಬಾಟ್, ಆಷ್ಟನ್ ಅಗರ್, ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಝಲ್ವುಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್ವೆಲ್, ಕೇನ್ ರಿಚರ್ಡ್ಸನ್, ಡೇನಿಯಲ್ ಸ್ಯಾಮ್ಸ್, ಸ್ಟೀವ್ ಸ್ಮಿತ್, ಮ್ಯಾಥ್ಯೂ ವೇಡ್, ಆಡಮ್ ಝಂಪಾ ಆಟದಲ್ಲಿ ಭಾಗವಹಿಸಲಿದ್ದಾರೆ.