Friday, March 14, 2025

ಸತ್ಯ | ನ್ಯಾಯ |ಧರ್ಮ

ದಾಖಲೆಯ 3ನೇ ಚಾಂಪಿಯನ್ಸ್ ಟ್ರೋಫಿ ಕಿರೀಟಕ್ಕೆ ಮುತ್ತಿಕ್ಕಿದ ಭಾರತ

ಚಾಂಪಿಯನ್ಸ್‌ ಟ್ರೋಫಿ ಗೆದ್ದ ಭಾರತ ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 4 ವಿಕೆಟ್‌ ಜಯ, 25 ವರ್ಷಗಳ ಲೆಕ್ಕ ಚುಕ್ತ

ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದ ಭಾರತ ತಂಡ ದಾಖಲೆಯ 3ನೇ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಮುತ್ತಿಕ್ಕಿದೆ.

2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್​ನಲ್ಲಿ ನ್ಯೂಜಿಲೆಂಡ್ ವಿರುದ್ಧ 4 ವಿಕೆಟ್​ಗಳ ಭರ್ಜರಿ ಗೆಲುವಿನೊಂದಿಗೆ ಭಾರತ ತಂಡ ದಾಖಲೆಯ 3ನೇ ಚಾಂಪಿಯನ್ಸ್ ಟ್ರೋಫಿ ಕಿರೀಟಕ್ಕೆ ಮುತ್ತಿಕ್ಕಿ ಸಂಭ್ರಮಿಸಿದೆ. ಈ ಜಯದೊಂದಿಗೆ 2000ರ ಚಾಂಪಿಯನ್ಸ್ ಟ್ರೋಫಿ ಫೈನಲ್​ ಸೋಲಿಗೆ 25 ವರ್ಷಗಳ ನಂತರ ಸೇಡು ತೀರಿಸಿಕೊಂಡಿದೆ. 2002, 2013ರಲ್ಲಿ ಪ್ರಶಸ್ತಿ ಎತ್ತಿ ಹಿಡಿದ್ದಿದ್ದ ಭಾರತ ಇದೀಗ 12 ವರ್ಷಗಳ ನಂತರ ಚಾಂಪಿಯನ್ಸ್ ಟ್ರೋಫಿ ಬರ ನೀಗಿಸಿದೆ. 2017ರಲ್ಲಿ ರನ್ನರ್​ಅಪ್ ಆಗಿದ್ದ ಮೆನ್ ಇನ್ ಬ್ಲ್ಯೂ, 2024ರ ವಿಶ್ವಕಪ್ ನಂತರ ಸತತ 2ನೇ ಐಸಿಸಿ ಟ್ರೋಫಿಯನ್ನು ತನ್ನ ಮಡಿಲಿಗೆ ಹಾಕಿಕೊಂಡಿದೆ. ಟೂರ್ನಿಯಲ್ಲಿ ಅಜೇಯ ಗೆಲುವು ಸಾಧಿಸಿ ದಾಖಲೆ ನಿರ್ಮಿಸಿದೆ ಭಾರತ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page