ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್ 2024ರ ಬಗ್ಗೆ ವಿರೋಧ ಪಕ್ಷಗಳ ಒಕ್ಕೂಟವಾದ ‘ಇಂಡಿಯಾ’ ನಾಯಕರು ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.
ಈ ನಿಟ್ಟಿನಲ್ಲಿ ಅವರು ಕೇಂದ್ರ ಬಜೆಟ್ ವಿರುದ್ಧ ಪ್ರತಿಭಟನೆ ನಡೆಸಿದರು. ಬುಧವಾರ ಬೆಳಗ್ಗೆ ಸಭೆಗೂ ಮುನ್ನ ಸಮ್ಮಿಶ್ರ ಪಕ್ಷಗಳ ಎಲ್ಲ ಸಂಸದರು ಸಂಸತ್ತಿಗೆ ಆಗಮಿಸಿ ಪ್ರತಿಭಟನೆ ಆರಂಭಿಸಿದರು. ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಸರಕಾರ ಉಳಿಸಲು ಮಂಡಿಸಿದ ಬಜೆಟ್ ಇದಾಗಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸೇರಿದಂತೆ ಸಮ್ಮಿಶ್ರ ಪಕ್ಷಗಳ ಎಲ್ಲಾ ನಾಯಕರು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಬಜೆಟ್ ನಲ್ಲಿ ಹಲವರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿದರು. ‘ಇದು ಅನ್ಯಾಯ. ನ್ಯಾಯಕ್ಕಾಗಿ ಹೋರಾಟ ಮಾಡುತ್ತೇವೆ ಎಂದರು. ಈ ವೇಳೆ ಎಲ್ಲ ಮುಖಂಡರು ಧ್ವಜ ಪ್ರದರ್ಶಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.