Home Uncategorized ಉತ್ತರ ಪ್ರದೇಶದಲ್ಲಿ 43 ಕ್ಷೇತ್ರಗಳಲ್ಲಿ ‘INDIA’ ಮುನ್ನಡೆ

ಉತ್ತರ ಪ್ರದೇಶದಲ್ಲಿ 43 ಕ್ಷೇತ್ರಗಳಲ್ಲಿ ‘INDIA’ ಮುನ್ನಡೆ

0

ಲಖನೌ: ದೇಶದಲ್ಲಿ ಹೆಚ್ಚು ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ (80 ಲೋಕಸಭಾ ಕ್ಷೇತ್ರಗಳು) ಹೊಂದಿರುವ ಉತ್ತರ ಪ್ರದೇಶದಲ್ಲಿ ಎನ್‌ಡಿಎ ಮತ್ತು ‘ಇಂಡಿಯಾ’ ಎರಡಕ್ಕೂ ಅತ್ಯಂತ ಪ್ರಮುಖವಾದದ್ದಾಗಿದೆ. 2019ರ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ ಈ ಬಾರಿ ಹಿನ್ನಡೆ ಅನುಭವಿಸಿದೆ. ಇಂಡಿಯಾ ಕೂಟ 43 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಮಧ್ಯಾಹ್ನ 12 ಗಂಟೆಯ ಟ್ರೆಂಡ್ ಪ್ರಕಾರ ಉತ್ತರ ಪ್ರದೇಶದ 80 ಲೋಕಸಭಾ ಕ್ಷೇತ್ರಗಳ ಪೈಕಿ 43 ಕ್ಷೇತ್ರಗಳಲ್ಲಿ ‘ಇಂಡಿಯಾ’ ಬಣ, 36 ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ.

ಇಲ್ಲಿನ ಬಹುತೇಕ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಎಸ್‌ಪಿ ನಡುವೆ ನಿಕಟ ಪೈಪೋಟಿ ಇದ್ದು, 8 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಪಡೆದಿದೆ.ರಾಯ್‌ಬರೇಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ವಾರಾಣಸಿಯಲ್ಲಿ ಪ್ರಧಾನಿ ಮೋದಿ ಮುನ್ನಡೆ ಕಾಯ್ದುಕೊಂಡಿದ್ದರೆ, ಅಮೇಠಿಯಲ್ಲಿ ಸ್ಮೃತಿ ಇರಾನಿ ಹಿನ್ನಡೆಯಾಗಿದೆ.

2019ರ ಲೋಕಸಭಾ ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಬಿಜೆಪಿ 62 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಬಿಎಸ್‌ಪಿ 10, ಎಸ್‌ಪಿ 5 ಮತ್ತು ಅಪ್ನಾ ದಳ 2 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿರುವುದನ್ನು ಇಲ್ಲಿ ಸ್ಮರಿಸಬಹುದು.

You cannot copy content of this page

Exit mobile version