ಹೊಸದಿಲ್ಲಿ: ನಿನ್ನೆಯಷ್ಟೇ ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದ ಹಿನ್ನೆಲೆಯಲ್ಲಿ ಎನ್‌ಡಿಎ ಮತ್ತು ಇಂಡಿಯಾ ಕೂಟಗಳಿಂದ ಸರ್ಕಾರ ರಚಿಸುವ ಕಸರತ್ತು ಜೋರಾಗಿಯೇ ನಡೆದಿದೆ. ಒಂದೆಡೆ ಎನ್‌ಡಿಎ ಸಭೆಯಲ್ಲಿ ಭಾಗವಹಿಸಲು ಮಿತ್ರ ಪಕ್ಷಗಳ ಮುಖಂಡರು ದೆಹಲಿಗೆ ದೌಡಾಯಿಸಿದ್ದರೆ, ಇನ್ನೊಂದೆಡೆ ಕೇಂದ್ರದಲ್ಲಿ ಇಂದು ಬುಧವಾರ ಸಂಜೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಇಂಡಿಯಾ ನಾಯಕರು ಸಭೆ ನಡೆಸಲು ಸಿದ್ಧತೆ ನಡೆಸಿದ್ದಾರೆ.
ಈ ಸಭೆಯಲ್ಲಿ ಮಾಜಿ ಮಿತ್ರ ಪಕ್ಷಗಳಾದ ಟಿಡಿಪಿ ಹಾಗೂ ಜೆಡಿಯುನ ಮುಖ್ಯಸ್ಥರಾದ ನಿತೀಶ್ ಕುಮಾರ್ ಹಾಗೂ ಚಂದ್ರಬಾಬು ನಾಯ್ಡು ಅವರೊಂದಿಗೆ ಮಾತುಕತೆ ನಡೆಸುವ ಕಾರ್ಯತಂತ್ರದ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಮಲ್ಲಿಕಾರ್ಜುನ್ ಖರ್ಗೆ ಈ ಕುರಿತು ಎಕ್ಸ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದು, “ಇಂಡಿಯಾ ಜನಬಂಧನ್ ನಾಯಕರು ಇಂದು ಸಂಜೆ 6 ಗಂಟೆಗೆ 10, ರಾಜಾಜಿ ಮಾರ್ಗ್ ನಲ್ಲಿ ಸಭೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಚುನಾವಣಾ ಫಲಿತಾಂಶ ಹಾಗೂ ನಂತರದ ಕಾರ್ಯತಂತ್ರದ ಕುರಿತು ಚರ್ಚೆ ನಡೆಸಲಾಗುವುದು” ಎಂದು ಪೋಸ್ಟಿನಲ್ಲಿ ಹೇಳಿಕೊಂಡಿದ್ದಾರೆ.