ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಯಿಂದ ಬಂದ್ ಆಗಿದ್ದ ವಿವಿಧ ರಾಜ್ಯಗಳ 32 ವಿಮಾನ ನಿಲ್ದಾಣಗಳನ್ನು ಮತ್ತೆ ಕಾರ್ಯಾರಂಭ ಮಾಡಲಾಗಿದೆ.
32 ವಿಮಾನ ನಿಲ್ದಾಣಗಳನ್ನು ತೆರೆಯುವಂತೆ ಭಾರತೀಯ ವಾಯುಪಡೆ ಅಧಿಕಾರಿಗಳು ಸೂಚನೆ ನೀಡಿದ ಬಳಿಕ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಸಂಬಂಧಪಟ್ಟ ವಿಮಾನ ನಿಲ್ದಾಣಗಳಿಗೆ ಸೂಚನೆ ನೀಡಿದೆ.
ಹೀಗಾಗಿ ದೇಶದ ಪಶ್ಚಿಮ ಮತ್ತು ಉತ್ತರ ಭಾಗಗಳಲ್ಲಿ ತಾತ್ಕಾಲಿಕವಾಗಿ ಮುಚ್ಚಲಾಗಿದ್ದ ಏರ್‌ಪೋರ್ಟ್‌ಗಳು ಮತ್ತೆ ಕಾರ್ಯಾರಂಭ ಮಾಡಲಿವೆ.
ಭಾರತ ಹಾಗೂ ಪಾಕ್ ನಡುವೆ ಸಂಘರ್ಷ ತೀವ್ರಗೊಂಡಿದ್ದ ಬೆನ್ನಲ್ಲೇ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು 32 ವಿಮಾನ ನಿಲ್ದಾಣಗಳನ್ನು ಮೇ.15ರವರೆಗೆ ತಾತ್ಕಾಲಿಕವಾಗಿ ಬಂದ್ ಮಾಡುವಂತೆ ಸೂಚನೆ ನೀಡಿತ್ತು.