Home ಕ್ರೀಡೆ  ಏಷ್ಯಾಕಪ್​ಗೆ ಭಾರತ ತಂಡ ಪ್ರಕಟ, ಸೂರ್ಯಕುಮಾರ್ ನಾಯಕ ಸಂಜುಗೆ ಸ್ಥಾನ

 ಏಷ್ಯಾಕಪ್​ಗೆ ಭಾರತ ತಂಡ ಪ್ರಕಟ, ಸೂರ್ಯಕುಮಾರ್ ನಾಯಕ ಸಂಜುಗೆ ಸ್ಥಾನ

ಏಷ್ಯಾಕಪ್ 2025 (Asia Cup 2025) ಟೂರ್ನಿಗೆ ಭಾರತ ತಂಡವನ್ನು (India Team) ಪ್ರಕಟಿಸಲಾಗಿದೆ (Announced). ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು 15 ಸದಸ್ಯರುಗಳ ತಂಡ ಪ್ರಕಟಿಸಿದ್ದು, ಈ ತಂಡವನ್ನು ಸೂರ್ಯಕುಮಾರ್ ಯಾದವ್ (Suryakumar Yadav) ಮುನ್ನಡೆಸಲಿದ್ದು, ಉಪನಾಯಕನಾಗಿ ಶುಭ್​ಮನ್ ಗಿಲ್ ಕಾಣಿಸಿಕೊಳ್ಳಲಿದ್ದಾರೆ.

ತಂಡದಲ್ಲಿ ಮೊಹಮ್ಮದ್ ಸಿರಾಜ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ ಹಾಗೂ ಯಶಸ್ವಿ ಜೈಸ್ವಾಲ್​ಗೆ ಅವಕಾಶ ನೀಡಿಲ್ಲ. ಮೊಹಮ್ಮದ್ ಸಿರಾಜ್​ಗೆ ವಿಶ್ರಾಂತಿ ನೀಡಲಾಗಿದ್ದರೆ, ಗಾಯಾಳು ರಿಷಭ್ ಪಂತ್​ರನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ. ತಂಡದಲ್ಲಿ ಸ್ಥಾನ ಪಡೆದಿರುವ ಆಟಗಾರರನ್ನು ನೋಡುವುದಾದರೆ, ಆರಂಭಿಕರಾಗಿ ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ ಕಾಣಿಸಿಕೊಂಡಿದ್ದಾರೆ. ಮೂರನೇ ಕ್ರಮಾಂಕಕ್ಕೆ ಎಡಗೈ ಆಟಗಾರ ತಿಲಕ್ ವರ್ಮಾ, ನಾಲ್ಕನೇ ಕ್ರಮಾಂಕಕ್ಕೆ ನಾಯಕ ಸೂರ್ಯಕುಮಾರ್ ಯಾದವ್ ಆಡಲಿದ್ದಾರೆ.

ಮಧ್ಯಮ ಕ್ರಮಾಂಕದಲ್ಲಿ ರಿಂಕು ಸಿಂಗ್ ಆಡಿದರೆ, ಆಲ್​ರೌಂಡರ್​ಗಳಾಗಿ ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಶಿವಂ ದುಬೇ ಸ್ಥಾನ ಪಡೆದಿದ್ದಾರೆ. ಬೌಲರ್​​ಗಳಾಗಿ ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್ ಹಾಗೂ ಜಸ್​ಪ್ರೀತ್ ಬುಮ್ರಾ ತಂಡದಲ್ಲಿದ್ದಾರೆ.

ಏಷ್ಯಾ ಕಪ್​ಗೆ ಭಾರತ ತಂಡ
ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ), ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಈ ಬಾರಿಯ ಏಷ್ಯಾಕಪ್​ನಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಅದರಂತೆ ಭಾರತ, ಪಾಕಿಸ್ತಾನ್, ಯುಎಇ, ಒಮಾನ್ ತಂಡಗಳು ಗ್ರೂಪ್ ಎ ನಲ್ಲಿ ಕಣಕ್ಕಿಳಿದರೆ, ಬಾಂಗ್ಲಾದೇಶ್, ಶ್ರೀಲಂಕಾ, ಅಫ್ಘಾನಿಸ್ತಾನ್ ಹಾಗೂ ಹಾಂಗ್​ಕಾಂಗ್ ತಂಡಗಳು ಗ್ರೂಪ್ ಬಿ ನಲ್ಲಿ ಸೆಣಲಿಸಲಿದೆ. ಈ ತಂಡಗಳಲ್ಲಿ 4 ಟೀಮ್​ಗಳು ಸೂಪರ್-4 ಹಂತಕ್ಕೇರಲಿದೆ.

You cannot copy content of this page

Exit mobile version