Monday, October 20, 2025

ಸತ್ಯ | ನ್ಯಾಯ |ಧರ್ಮ

ಸೋಲಿನೊಂದಿಗೆ ಸರಣಿ ಆರಂಭ, ಆಸಿಸ್ ವಿರುದ್ಧ ಮುಗ್ಗರಿಸಿದ ಭಾರತ

ಆಸ್ಟ್ರೇಲಿಯಾ : ಭಾರತ vs ಆಸ್ಟ್ರೇಲಿಯಾ (India vs Australia) ನಡುವಿನ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ 7 ವಿಕೆಟ್​ಗಳ ಜಯ ಸಾಧಿಸಿದೆ. ಇಂದು (ಅ.20) ಪರ್ತ್ ಮೈದಾನದಲ್ಲಿ (Perth stadium) ನಡೆದ ಪಂದ್ಯಕ್ಕೆ ಮಳೆ ಅಡ್ಡಿಯಾಗಿತ್ತು. ಹೀಗಾಗಿ ಪಂದ್ಯವನ್ನು 26 ಓವರ್​ಗಳಿಗೆ ಸೀಮಿತಗೊಳಿಸಲಾಯಿತು. ಟಾಸ್ ಸೋತು ಬ್ಯಾಟಿಂಗ್ ಮಾಡಿದ ಭಾರತ (Team India) 9 ವಿಕೆಟ್​ಗಳ ನಷ್ಟಕ್ಕೆ 136 ರನ್ ಗಳಿಸಿತ್ತು. ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ 3 ವಿಕೆಟ್ ಕಳೆದುಕೊಂಡು ಗುರಿ ಮುಟ್ಟುವ ಮೂಲಕ ಜಯ ಸಾಧಿಸಿದೆ.

ಇಂದಿನ ಪಂದ್ಯದಲ್ಲಿ ಭಾರತ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಬರೋಬ್ಬರಿ 7 ತಿಂಗಳುಗಳ ನಂತರ ನೀಲಿ ಜರ್ಸಿಯಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಇಂದಿನ ಪಂದ್ಯದಲ್ಲಿ ಈ ಇಬ್ಬರೂ ವಿಫಲರಾಗಿದ್ದು, ಆಸ್ಟ್ರೇಲಿಯಾದ ಜನ ಇನ್ನಷ್ಟು ಸುಲಭವಾಗಿದೆ. ಈ ಮೈದಾನದಲ್ಲಿ ಆಸ್ಟ್ರೇಲಿಯಾ ತನ್ನ ಮೊದಲ ಗೆಲುವನ್ನು ದಾಖಲಿಸಿದೆ.

ಭಾರತ ತಂಡದ ಪರ ಕನ್ನಡಿಗ ಕೆಎಲ್ ರಾಹುಲ್ 38 ರನ್, ಅಕ್ಷರ್ ಪಟೇಲ್ 31 ರನ್, ಮತ್ತು ನಿತೀಶ್ ಕುಮಾರ್ ರೆಡ್ಡಿ ಅಜೇಯ 19 ರನ್ ಬಾರಿಸಿ ತಂಡವನ್ನು 100 ರನ್​ಗಳ ಗಡಿ ದಾಟಿಸಿದರು. ಆದ್ರೆ ಆಸ್ಟ್ರೇಲಿಯಾ ಕೇವಲ 3 ವಿಕೆಟ್ ಕಳೆದುಕೊಂಡು ನಿರಾಯಾಸವಾಗಿ ಗೆಲುವು ಸಾಧಿಸಿದೆ

Related Articles

ಇತ್ತೀಚಿನ ಸುದ್ದಿಗಳು

You cannot copy content of this page