ಆಸ್ಟ್ರೇಲಿಯಾ : ಭಾರತ vs ಆಸ್ಟ್ರೇಲಿಯಾ (India vs Australia) ನಡುವಿನ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ 7 ವಿಕೆಟ್ಗಳ ಜಯ ಸಾಧಿಸಿದೆ. ಇಂದು (ಅ.20) ಪರ್ತ್ ಮೈದಾನದಲ್ಲಿ (Perth stadium) ನಡೆದ ಪಂದ್ಯಕ್ಕೆ ಮಳೆ ಅಡ್ಡಿಯಾಗಿತ್ತು. ಹೀಗಾಗಿ ಪಂದ್ಯವನ್ನು 26 ಓವರ್ಗಳಿಗೆ ಸೀಮಿತಗೊಳಿಸಲಾಯಿತು. ಟಾಸ್ ಸೋತು ಬ್ಯಾಟಿಂಗ್ ಮಾಡಿದ ಭಾರತ (Team India) 9 ವಿಕೆಟ್ಗಳ ನಷ್ಟಕ್ಕೆ 136 ರನ್ ಗಳಿಸಿತ್ತು. ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ 3 ವಿಕೆಟ್ ಕಳೆದುಕೊಂಡು ಗುರಿ ಮುಟ್ಟುವ ಮೂಲಕ ಜಯ ಸಾಧಿಸಿದೆ.
ಇಂದಿನ ಪಂದ್ಯದಲ್ಲಿ ಭಾರತ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಬರೋಬ್ಬರಿ 7 ತಿಂಗಳುಗಳ ನಂತರ ನೀಲಿ ಜರ್ಸಿಯಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಇಂದಿನ ಪಂದ್ಯದಲ್ಲಿ ಈ ಇಬ್ಬರೂ ವಿಫಲರಾಗಿದ್ದು, ಆಸ್ಟ್ರೇಲಿಯಾದ ಜನ ಇನ್ನಷ್ಟು ಸುಲಭವಾಗಿದೆ. ಈ ಮೈದಾನದಲ್ಲಿ ಆಸ್ಟ್ರೇಲಿಯಾ ತನ್ನ ಮೊದಲ ಗೆಲುವನ್ನು ದಾಖಲಿಸಿದೆ.
ಭಾರತ ತಂಡದ ಪರ ಕನ್ನಡಿಗ ಕೆಎಲ್ ರಾಹುಲ್ 38 ರನ್, ಅಕ್ಷರ್ ಪಟೇಲ್ 31 ರನ್, ಮತ್ತು ನಿತೀಶ್ ಕುಮಾರ್ ರೆಡ್ಡಿ ಅಜೇಯ 19 ರನ್ ಬಾರಿಸಿ ತಂಡವನ್ನು 100 ರನ್ಗಳ ಗಡಿ ದಾಟಿಸಿದರು. ಆದ್ರೆ ಆಸ್ಟ್ರೇಲಿಯಾ ಕೇವಲ 3 ವಿಕೆಟ್ ಕಳೆದುಕೊಂಡು ನಿರಾಯಾಸವಾಗಿ ಗೆಲುವು ಸಾಧಿಸಿದೆ